ಯಾಕೋಬನು 2 : 1 (KNV)
ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.
ಯಾಕೋಬನು 2 : 2 (KNV)
ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು
ಯಾಕೋಬನು 2 : 3 (KNV)
ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
ಯಾಕೋಬನು 2 : 4 (KNV)
ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
ಯಾಕೋಬನು 2 : 5 (KNV)
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಯಾಕೋಬನು 2 : 6 (KNV)
ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
ಯಾಕೋಬನು 2 : 7 (KNV)
ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
ಯಾಕೋಬನು 2 : 8 (KNV)
ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
ಯಾಕೋಬನು 2 : 9 (KNV)
ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
ಯಾಕೋಬನು 2 : 10 (KNV)
ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
ಯಾಕೋಬನು 2 : 11 (KNV)
ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
ಯಾಕೋಬನು 2 : 12 (KNV)
ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
ಯಾಕೋಬನು 2 : 13 (KNV)
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
ಯಾಕೋಬನು 2 : 14 (KNV)
ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
ಯಾಕೋಬನು 2 : 15 (KNV)
ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
ಯಾಕೋಬನು 2 : 16 (KNV)
ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
ಯಾಕೋಬನು 2 : 17 (KNV)
ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
ಯಾಕೋಬನು 2 : 18 (KNV)
ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
ಯಾಕೋಬನು 2 : 19 (KNV)
ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
ಯಾಕೋಬನು 2 : 20 (KNV)
ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
ಯಾಕೋಬನು 2 : 21 (KNV)
ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
ಯಾಕೋಬನು 2 : 22 (KNV)
ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
ಯಾಕೋಬನು 2 : 23 (KNV)
ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
ಯಾಕೋಬನು 2 : 24 (KNV)
ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
ಯಾಕೋಬನು 2 : 25 (KNV)
ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?
ಯಾಕೋಬನು 2 : 26 (KNV)
ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
❮
❯