ಯಾಕೋಬನು 3 : 1 (KNV)
ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
ಯಾಕೋಬನು 3 : 2 (KNV)
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
ಯಾಕೋಬನು 3 : 3 (KNV)
ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ.
ಯಾಕೋಬನು 3 : 4 (KNV)
ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.
ಯಾಕೋಬನು 3 : 5 (KNV)
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
ಯಾಕೋಬನು 3 : 6 (KNV)
ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
ಯಾಕೋಬನು 3 : 7 (KNV)
ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.
ಯಾಕೋಬನು 3 : 8 (KNV)
ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
ಯಾಕೋಬನು 3 : 9 (KNV)
ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
ಯಾಕೋಬನು 3 : 10 (KNV)
ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
ಯಾಕೋಬನು 3 : 11 (KNV)
ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ?
ಯಾಕೋಬನು 3 : 12 (KNV)
ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
ಯಾಕೋಬನು 3 : 13 (KNV)
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
ಯಾಕೋಬನು 3 : 14 (KNV)
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
ಯಾಕೋಬನು 3 : 15 (KNV)
ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
ಯಾಕೋಬನು 3 : 16 (KNV)
ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
ಯಾಕೋಬನು 3 : 17 (KNV)
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.
ಯಾಕೋಬನು 3 : 18 (KNV)
ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
❮
❯