ಯಾಕೋಬನು 5 : 1 (KNV)
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
ಯಾಕೋಬನು 5 : 2 (KNV)
ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
ಯಾಕೋಬನು 5 : 3 (KNV)
ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
ಯಾಕೋಬನು 5 : 4 (KNV)
ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
ಯಾಕೋಬನು 5 : 5 (KNV)
ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
ಯಾಕೋಬನು 5 : 6 (KNV)
ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
ಯಾಕೋಬನು 5 : 7 (KNV)
ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
ಯಾಕೋಬನು 5 : 8 (KNV)
ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
ಯಾಕೋಬನು 5 : 9 (KNV)
ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
ಯಾಕೋಬನು 5 : 10 (KNV)
ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
ಯಾಕೋಬನು 5 : 11 (KNV)
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
ಯಾಕೋಬನು 5 : 12 (KNV)
ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
ಯಾಕೋಬನು 5 : 13 (KNV)
ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
ಯಾಕೋಬನು 5 : 14 (KNV)
ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
ಯಾಕೋಬನು 5 : 15 (KNV)
ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
ಯಾಕೋಬನು 5 : 16 (KNV)
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
ಯಾಕೋಬನು 5 : 17 (KNV)
ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
ಯಾಕೋಬನು 5 : 18 (KNV)
ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
ಯಾಕೋಬನು 5 : 19 (KNV)
ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ
ಯಾಕೋಬನು 5 : 20 (KNV)
ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.

1 2 3 4 5 6 7 8 9 10 11 12 13 14 15 16 17 18 19 20