ಯೆರೆಮಿಯ 44 : 1 (KNV)
ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
ಯೆರೆಮಿಯ 44 : 2 (KNV)
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
ಯೆರೆಮಿಯ 44 : 3 (KNV)
ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
ಯೆರೆಮಿಯ 44 : 4 (KNV)
ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
ಯೆರೆಮಿಯ 44 : 5 (KNV)
ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.
ಯೆರೆಮಿಯ 44 : 6 (KNV)
ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.
ಯೆರೆಮಿಯ 44 : 7 (KNV)
ಆದದರಿಂದ ಈಗ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರೂ ಆಗಿರುವ ಕರ್ತನು ಹೀಗೆ ಹೇಳುತ್ತಾನೆ--ಯಾಕೆ ನಿಮಗೆ ಉಳಿದಿರುವ ವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ ಹೆಂಗಸರನ್ನೂ ಮಗುವನ್ನೂ ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು ನಿಮ್ಮ ಪ್ರಾಣ ಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳು ತ್ತೀರಿ?
ಯೆರೆಮಿಯ 44 : 8 (KNV)
ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?
ಯೆರೆಮಿಯ 44 : 9 (KNV)
ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?
ಯೆರೆಮಿಯ 44 : 10 (KNV)
ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.
ಯೆರೆಮಿಯ 44 : 11 (KNV)
ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
ಯೆರೆಮಿಯ 44 : 12 (KNV)
ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
ಯೆರೆಮಿಯ 44 : 13 (KNV)
ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು.
ಯೆರೆಮಿಯ 44 : 14 (KNV)
ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
ಯೆರೆಮಿಯ 44 : 15 (KNV)
ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--
ಯೆರೆಮಿಯ 44 : 16 (KNV)
ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.
ಯೆರೆಮಿಯ 44 : 17 (KNV)
ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
ಯೆರೆಮಿಯ 44 : 18 (KNV)
ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
ಯೆರೆಮಿಯ 44 : 19 (KNV)
ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?
ಯೆರೆಮಿಯ 44 : 20 (KNV)
ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ--
ಯೆರೆಮಿಯ 44 : 21 (KNV)
ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
ಯೆರೆಮಿಯ 44 : 22 (KNV)
ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
ಯೆರೆಮಿಯ 44 : 23 (KNV)
ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
ಯೆರೆಮಿಯ 44 : 24 (KNV)
ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ.
ಯೆರೆಮಿಯ 44 : 25 (KNV)
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.
ಯೆರೆಮಿಯ 44 : 26 (KNV)
ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
ಯೆರೆಮಿಯ 44 : 27 (KNV)
ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
ಯೆರೆಮಿಯ 44 : 28 (KNV)
ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
ಯೆರೆಮಿಯ 44 : 29 (KNV)
ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 44 : 30 (KNV)
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30

BG:

Opacity:

Color:


Size:


Font: