ಯೆರೆಮಿಯ 47 : 1 (KNV)
ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್‌ ನಾಚಿಕೆಹೊಂದಿ ಹೆದರಿಕೊಂಡಿತು.
ಯೆರೆಮಿಯ 47 : 2 (KNV)
ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.
ಯೆರೆಮಿಯ 47 : 3 (KNV)
ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.
ಯೆರೆಮಿಯ 47 : 4 (KNV)
ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
ಯೆರೆಮಿಯ 47 : 5 (KNV)
ಲೂಹೀತ್‌ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
ಯೆರೆಮಿಯ 47 : 6 (KNV)
ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
ಯೆರೆಮಿಯ 47 : 7 (KNV)
ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
ಯೆರೆಮಿಯ 47 : 8 (KNV)
ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.
ಯೆರೆಮಿಯ 47 : 9 (KNV)
ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ.
ಯೆರೆಮಿಯ 47 : 10 (KNV)
ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
ಯೆರೆಮಿಯ 47 : 11 (KNV)
ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.
ಯೆರೆಮಿಯ 47 : 12 (KNV)
ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು.
ಯೆರೆಮಿಯ 47 : 13 (KNV)
ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ ಹಾಗೆಯೇ ಮೋವಾಬು ಕೇಮೋ ಷನ ವಿಷಯ ನಾಚಿಕೆಪಡುವದು.
ಯೆರೆಮಿಯ 47 : 14 (KNV)
ನಾವು ಪರಾಕ್ರಮ ಶಾಲಿಗಳೂ ಯುದ್ಧಕ್ಕೆ ಬಲಿಷ್ಠರೂ ಎಂದು ನೀವು ಹೇಳುವದು ಹೇಗೆ?
ಯೆರೆಮಿಯ 47 : 15 (KNV)
ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
ಯೆರೆಮಿಯ 47 : 16 (KNV)
ಮೋವಾಬಿನ ಆಪತ್ತು ಬರುವದಕ್ಕೆ ಸವಿಾಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ.
ಯೆರೆಮಿಯ 47 : 17 (KNV)
ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.
ಯೆರೆಮಿಯ 47 : 18 (KNV)
ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
ಯೆರೆಮಿಯ 47 : 19 (KNV)
ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
ಯೆರೆಮಿಯ 47 : 20 (KNV)
ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
ಯೆರೆಮಿಯ 47 : 21 (KNV)
ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್‌ನ ಮೇಲೆಯೂ
ಯೆರೆಮಿಯ 47 : 22 (KNV)
ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್‌ದಿಬ್ಲಾತಯಿಮ್‌ನ ಮೇಲೆಯೂ
ಯೆರೆಮಿಯ 47 : 23 (KNV)
ಕಿರ್ಯಾತಯಾಮಿನ ಮೇಲೆಯೂ ಬೇತ್‌ಗಾಮುಲಿನ ಮೇಲೆಯೂ ಬೇತ್‌ಮೆಯೋನಿನ ಮೇಲೆಯೂ
ಯೆರೆಮಿಯ 47 : 24 (KNV)
ಕೆರೀಯೋತ್‌ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.
ಯೆರೆಮಿಯ 47 : 25 (KNV)
ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 47 : 26 (KNV)
ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
ಯೆರೆಮಿಯ 47 : 27 (KNV)
ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ನೀನು ಅವರ ವಿಷಯ ಯಾವಾಗ ಮಾತನಾಡಿದಂದಿನಿಂದ ಸಂತೋಷಕ್ಕಾಗಿ ತಲೆ ಅಲ್ಲಾಡಿಸಿದಿಯಲ್ಲಾ.
ಯೆರೆಮಿಯ 47 : 28 (KNV)
ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
ಯೆರೆಮಿಯ 47 : 29 (KNV)
ಮೋವಾ ಬಿನ ಹೆಮ್ಮೆಯನ್ನು ಕುರಿತು ಅದರ ಮಹಾಗರ್ವವನ್ನ್ನೂ ಡಂಬವನ್ನೂ ಅಹಂಕಾರವನ್ನೂ ಬಡಾಯಿಯನ್ನೂ ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.
ಯೆರೆಮಿಯ 47 : 30 (KNV)
ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ.
ಯೆರೆಮಿಯ 47 : 31 (KNV)
ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್‌ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು.
ಯೆರೆಮಿಯ 47 : 32 (KNV)
ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.
ಯೆರೆಮಿಯ 47 : 33 (KNV)
ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
ಯೆರೆಮಿಯ 47 : 34 (KNV)
ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್‌ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್‌ನ ನೀರುಗಳು ಸಹ ಹಾಳಾದವು.
ಯೆರೆಮಿಯ 47 : 35 (KNV)
ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 47 : 36 (KNV)
ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್‌ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
ಯೆರೆಮಿಯ 47 : 37 (KNV)
ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
ಯೆರೆಮಿಯ 47 : 38 (KNV)
ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 47 : 39 (KNV)
ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
ಯೆರೆಮಿಯ 47 : 40 (KNV)
ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು.
ಯೆರೆಮಿಯ 47 : 41 (KNV)
ಕೆರೀಯೋತ್‌ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
ಯೆರೆಮಿಯ 47 : 42 (KNV)
ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.
ಯೆರೆಮಿಯ 47 : 43 (KNV)
ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 47 : 44 (KNV)
ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 47 : 45 (KNV)
ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
ಯೆರೆಮಿಯ 47 : 46 (KNV)
ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
ಯೆರೆಮಿಯ 47 : 47 (KNV)
ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47

BG:

Opacity:

Color:


Size:


Font: