ಯೆರೆಮಿಯ 6 : 1 (KNV)
ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--
ಯೆರೆಮಿಯ 6 : 2 (KNV)
ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
ಯೆರೆಮಿಯ 6 : 3 (KNV)
ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
ಯೆರೆಮಿಯ 6 : 4 (KNV)
ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
ಯೆರೆಮಿಯ 6 : 5 (KNV)
ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
ಯೆರೆಮಿಯ 6 : 6 (KNV)
ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
ಯೆರೆಮಿಯ 6 : 7 (KNV)
ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
ಯೆರೆಮಿಯ 6 : 8 (KNV)
ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
ಯೆರೆಮಿಯ 6 : 9 (KNV)
ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
ಯೆರೆಮಿಯ 6 : 10 (KNV)
ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
ಯೆರೆಮಿಯ 6 : 11 (KNV)
ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
ಯೆರೆಮಿಯ 6 : 12 (KNV)
ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
ಯೆರೆಮಿಯ 6 : 13 (KNV)
ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
ಯೆರೆಮಿಯ 6 : 14 (KNV)
ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
ಯೆರೆಮಿಯ 6 : 15 (KNV)
ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
ಯೆರೆಮಿಯ 6 : 16 (KNV)
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ಯೆರೆಮಿಯ 6 : 17 (KNV)
ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ
ಯೆರೆಮಿಯ 6 : 18 (KNV)
ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
ಯೆರೆಮಿಯ 6 : 19 (KNV)
ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
ಯೆರೆಮಿಯ 6 : 20 (KNV)
ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
ಯೆರೆಮಿಯ 6 : 21 (KNV)
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
ಯೆರೆಮಿಯ 6 : 22 (KNV)
ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
ಯೆರೆಮಿಯ 6 : 23 (KNV)
ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
ಯೆರೆಮಿಯ 6 : 24 (KNV)
ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
ಯೆರೆಮಿಯ 6 : 25 (KNV)
ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.
ಯೆರೆಮಿಯ 6 : 26 (KNV)
ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
ಯೆರೆಮಿಯ 6 : 27 (KNV)
ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.
ಯೆರೆಮಿಯ 6 : 28 (KNV)
ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
ಯೆರೆಮಿಯ 6 : 29 (KNV)
ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
ಯೆರೆಮಿಯ 6 : 30 (KNV)
ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
ಯೆರೆಮಿಯ 6 : 31 (KNV)
ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
ಯೆರೆಮಿಯ 6 : 32 (KNV)
ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
ಯೆರೆಮಿಯ 6 : 33 (KNV)
ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
ಯೆರೆಮಿಯ 6 : 34 (KNV)
ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34

BG:

Opacity:

Color:


Size:


Font: