ಯೋಹಾನನು 1 : 1 (KNV)
ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
ಯೋಹಾನನು 1 : 2 (KNV)
ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು.
ಯೋಹಾನನು 1 : 3 (KNV)
ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
ಯೋಹಾನನು 1 : 4 (KNV)
ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
ಯೋಹಾನನು 1 : 5 (KNV)
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
ಯೋಹಾನನು 1 : 6 (KNV)
ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
ಯೋಹಾನನು 1 : 7 (KNV)
ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
ಯೋಹಾನನು 1 : 8 (KNV)
ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು.
ಯೋಹಾನನು 1 : 9 (KNV)
ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
ಯೋಹಾನನು 1 : 10 (KNV)
ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
ಯೋಹಾನನು 1 : 11 (KNV)
ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
ಯೋಹಾನನು 1 : 12 (KNV)
ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
ಯೋಹಾನನು 1 : 13 (KNV)
ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
ಯೋಹಾನನು 1 : 14 (KNV)
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ಯೋಹಾನನು 1 : 15 (KNV)
ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
ಯೋಹಾನನು 1 : 16 (KNV)
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
ಯೋಹಾನನು 1 : 17 (KNV)
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ಯೋಹಾನನು 1 : 18 (KNV)
ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
ಯೋಹಾನನು 1 : 19 (KNV)
ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
ಯೋಹಾನನು 1 : 20 (KNV)
ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು.
ಯೋಹಾನನು 1 : 21 (KNV)
ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
ಯೋಹಾನನು 1 : 22 (KNV)
ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು.
ಯೋಹಾನನು 1 : 23 (KNV)
ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
ಯೋಹಾನನು 1 : 24 (KNV)
ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು.
ಯೋಹಾನನು 1 : 25 (KNV)
ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
ಯೋಹಾನನು 1 : 26 (KNV)
ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;
ಯೋಹಾನನು 1 : 27 (KNV)
ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
ಯೋಹಾನನು 1 : 28 (KNV)
ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
ಯೋಹಾನನು 1 : 29 (KNV)
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
ಯೋಹಾನನು 1 : 30 (KNV)
ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.
ಯೋಹಾನನು 1 : 31 (KNV)
ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು.
ಯೋಹಾನನು 1 : 32 (KNV)
ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
ಯೋಹಾನನು 1 : 33 (KNV)
ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
ಯೋಹಾನನು 1 : 34 (KNV)
ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
ಯೋಹಾನನು 1 : 35 (KNV)
ಮಾರನೆಯ ದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದರು.
ಯೋಹಾನನು 1 : 36 (KNV)
ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
ಯೋಹಾನನು 1 : 37 (KNV)
ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು.
ಯೋಹಾನನು 1 : 38 (KNV)
ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
ಯೋಹಾನನು 1 : 39 (KNV)
ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
ಯೋಹಾನನು 1 : 40 (KNV)
ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
ಯೋಹಾನನು 1 : 41 (KNV)
ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
ಯೋಹಾನನು 1 : 42 (KNV)
ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
ಯೋಹಾನನು 1 : 43 (KNV)
ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
ಯೋಹಾನನು 1 : 44 (KNV)
ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು.
ಯೋಹಾನನು 1 : 45 (KNV)
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
ಯೋಹಾನನು 1 : 46 (KNV)
ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
ಯೋಹಾನನು 1 : 47 (KNV)
ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
ಯೋಹಾನನು 1 : 48 (KNV)
ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
ಯೋಹಾನನು 1 : 49 (KNV)
ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
ಯೋಹಾನನು 1 : 50 (KNV)
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.
ಯೋಹಾನನು 1 : 51 (KNV)
ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
❮
❯