ಯೋಹಾನನು 20 : 1 (KNV)
ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
ಯೋಹಾನನು 20 : 2 (KNV)
ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
ಯೋಹಾನನು 20 : 3 (KNV)
ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು.
ಯೋಹಾನನು 20 : 4 (KNV)
ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.
ಯೋಹಾನನು 20 : 5 (KNV)
ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ.
ಯೋಹಾನನು 20 : 6 (KNV)
ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ
ಯೋಹಾನನು 20 : 7 (KNV)
ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು.
ಯೋಹಾನನು 20 : 8 (KNV)
ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು.
ಯೋಹಾನನು 20 : 9 (KNV)
ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ.
ಯೋಹಾನನು 20 : 10 (KNV)
ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು.
ಯೋಹಾನನು 20 : 11 (KNV)
ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ
ಯೋಹಾನನು 20 : 12 (KNV)
ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
ಯೋಹಾನನು 20 : 13 (KNV)
ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
ಯೋಹಾನನು 20 : 14 (KNV)
ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.
ಯೋಹಾನನು 20 : 15 (KNV)
ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ
ಯೋಹಾನನು 20 : 16 (KNV)
ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
ಯೋಹಾನನು 20 : 17 (KNV)
ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
ಯೋಹಾನನು 20 : 18 (KNV)
ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
ಯೋಹಾನನು 20 : 19 (KNV)
ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
ಯೋಹಾನನು 20 : 20 (KNV)
ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
ಯೋಹಾನನು 20 : 21 (KNV)
ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
ಯೋಹಾನನು 20 : 22 (KNV)
ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;
ಯೋಹಾನನು 20 : 23 (KNV)
ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
ಯೋಹಾನನು 20 : 24 (KNV)
ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ.
ಯೋಹಾನನು 20 : 25 (KNV)
ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ
ಯೋಹಾನನು 20 : 26 (KNV)
ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
ಯೋಹಾನನು 20 : 27 (KNV)
ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
ಯೋಹಾನನು 20 : 28 (KNV)
ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
ಯೋಹಾನನು 20 : 29 (KNV)
ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.
ಯೋಹಾನನು 20 : 30 (KNV)
ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.
ಯೋಹಾನನು 20 : 31 (KNV)
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: