ಯೋಹಾನನು 3 : 1 (KNV)
ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು.
ಯೋಹಾನನು 3 : 2 (KNV)
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ಯೋಹಾನನು 3 : 3 (KNV)
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ಯೋಹಾನನು 3 : 4 (KNV)
ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.
ಯೋಹಾನನು 3 : 5 (KNV)
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ಯೋಹಾನನು 3 : 6 (KNV)
ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
ಯೋಹಾನನು 3 : 7 (KNV)
ನೀವು ತಿರಿಗಿ ಹುಟ್ಟತಕ್ಕದ್ದು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.
ಯೋಹಾನನು 3 : 8 (KNV)
ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
ಯೋಹಾನನು 3 : 9 (KNV)
ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ
ಯೋಹಾನನು 3 : 10 (KNV)
ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?
ಯೋಹಾನನು 3 : 11 (KNV)
ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.
ಯೋಹಾನನು 3 : 12 (KNV)
ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ?
ಯೋಹಾನನು 3 : 13 (KNV)
ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
ಯೋಹಾನನು 3 : 14 (KNV)
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ಯೋಹಾನನು 3 : 15 (KNV)
ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
ಯೋಹಾನನು 3 : 16 (KNV)
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ಯೋಹಾನನು 3 : 17 (KNV)
ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ಯೋಹಾನನು 3 : 18 (KNV)
ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
ಯೋಹಾನನು 3 : 19 (KNV)
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಯೋಹಾನನು 3 : 20 (KNV)
ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
ಯೋಹಾನನು 3 : 21 (KNV)
ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
ಯೋಹಾನನು 3 : 22 (KNV)
ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.
ಯೋಹಾನನು 3 : 23 (KNV)
ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
ಯೋಹಾನನು 3 : 24 (KNV)
ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.
ಯೋಹಾನನು 3 : 25 (KNV)
ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
ಯೋಹಾನನು 3 : 26 (KNV)
ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
ಯೋಹಾನನು 3 : 27 (KNV)
ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
ಯೋಹಾನನು 3 : 28 (KNV)
ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
ಯೋಹಾನನು 3 : 29 (KNV)
ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
ಯೋಹಾನನು 3 : 30 (KNV)
ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು.
ಯೋಹಾನನು 3 : 31 (KNV)
ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
ಯೋಹಾನನು 3 : 32 (KNV)
ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
ಯೋಹಾನನು 3 : 33 (KNV)
ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
ಯೋಹಾನನು 3 : 34 (KNV)
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ಯೋಹಾನನು 3 : 35 (KNV)
ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.
ಯೋಹಾನನು 3 : 36 (KNV)
ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
❮
❯