ಯೋಹಾನನು 6 : 1 (KNV)
ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
ಯೋಹಾನನು 6 : 2 (KNV)
ಆಗ ಆತನು ರೋಗಿಗಳಲ್ಲಿ ನಡಿಸಿದ ಆತನ ಅದ್ಭುತ ಕಾರ್ಯಗಳನ್ನು ನೋಡಿದ ಜನರ ದೊಡ್ಡ ಸಮೂಹವು ಆತನನ್ನು ಹಿಂಬಾಲಿಸುತ್ತಿತ್ತು.
ಯೋಹಾನನು 6 : 3 (KNV)
ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕೂತು ಕೊಂಡನು.
ಯೋಹಾನನು 6 : 4 (KNV)
ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು.
ಯೋಹಾನನು 6 : 5 (KNV)
ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.
ಯೋಹಾನನು 6 : 6 (KNV)
ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು.
ಯೋಹಾನನು 6 : 7 (KNV)
ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.
ಯೋಹಾನನು 6 : 8 (KNV)
ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
ಯೋಹಾನನು 6 : 9 (KNV)
ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
ಯೋಹಾನನು 6 : 10 (KNV)
ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
ಯೋಹಾನನು 6 : 11 (KNV)
ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
ಯೋಹಾನನು 6 : 12 (KNV)
ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು.
ಯೋಹಾನನು 6 : 13 (KNV)
ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.
ಯೋಹಾನನು 6 : 14 (KNV)
ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು.
ಯೋಹಾನನು 6 : 15 (KNV)
ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
ಯೋಹಾನನು 6 : 16 (KNV)
ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ
ಯೋಹಾನನು 6 : 17 (KNV)
ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು , ಯೇಸು ಅವರ ಬಳಿಗೆ ಬಂದಿರಲಿಲ್ಲ.
ಯೋಹಾನನು 6 : 18 (KNV)
ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು.
ಯೋಹಾನನು 6 : 19 (KNV)
ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.
ಯೋಹಾನನು 6 : 20 (KNV)
ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು.
ಯೋಹಾನನು 6 : 21 (KNV)
ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
ಯೋಹಾನನು 6 : 22 (KNV)
ಆತನ ಶಿಷ್ಯರು ಹತ್ತಿದ ಒಂದೇ ದೋಣಿಯ ಹೊರತು ಮತ್ತೊಂದು ಅಲ್ಲಿ ಇರಲಿಲ್ಲವೆಂದೂ ಆತನ ಶಿಷ್ಯರು ಮಾತ್ರ ಹೋದರೆಂದೂ ಯೇಸು ತನ್ನ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಮರು ದಿನ ಸಮುದ್ರದ ಆಚೆಯಲ್ಲಿ ನಿಂತಿದ್ದ ಜನರು ನೋಡಿ ದ್ದರು.
ಯೋಹಾನನು 6 : 23 (KNV)
(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
ಯೋಹಾನನು 6 : 24 (KNV)
ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
ಯೋಹಾನನು 6 : 25 (KNV)
ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.
ಯೋಹಾನನು 6 : 26 (KNV)
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
ಯೋಹಾನನು 6 : 27 (KNV)
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ಯೋಹಾನನು 6 : 28 (KNV)
ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ
ಯೋಹಾನನು 6 : 29 (KNV)
ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
ಯೋಹಾನನು 6 : 30 (KNV)
ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
ಯೋಹಾನನು 6 : 31 (KNV)
ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
ಯೋಹಾನನು 6 : 32 (KNV)
ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
ಯೋಹಾನನು 6 : 33 (KNV)
ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
ಯೋಹಾನನು 6 : 34 (KNV)
ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು.
ಯೋಹಾನನು 6 : 35 (KNV)
ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
ಯೋಹಾನನು 6 : 36 (KNV)
ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು.
ಯೋಹಾನನು 6 : 37 (KNV)
ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
ಯೋಹಾನನು 6 : 38 (KNV)
ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
ಯೋಹಾನನು 6 : 39 (KNV)
ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
ಯೋಹಾನನು 6 : 40 (KNV)
ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
ಯೋಹಾನನು 6 : 41 (KNV)
ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
ಯೋಹಾನನು 6 : 42 (KNV)
ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
ಯೋಹಾನನು 6 : 43 (KNV)
ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಿಮ್ಮ ನಿಮ್ಮೊಳಗೆ ಗುಣುಗುಟ್ಟ ಬೇಡಿರಿ.
ಯೋಹಾನನು 6 : 44 (KNV)
ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
ಯೋಹಾನನು 6 : 45 (KNV)
ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
ಯೋಹಾನನು 6 : 46 (KNV)
ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
ಯೋಹಾನನು 6 : 47 (KNV)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
ಯೋಹಾನನು 6 : 48 (KNV)
ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ.
ಯೋಹಾನನು 6 : 49 (KNV)
ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು.
ಯೋಹಾನನು 6 : 50 (KNV)
ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ.
ಯೋಹಾನನು 6 : 51 (KNV)
ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
ಯೋಹಾನನು 6 : 52 (KNV)
ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
ಯೋಹಾನನು 6 : 53 (KNV)
ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
ಯೋಹಾನನು 6 : 54 (KNV)
ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
ಯೋಹಾನನು 6 : 55 (KNV)
ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
ಯೋಹಾನನು 6 : 56 (KNV)
ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
ಯೋಹಾನನು 6 : 57 (KNV)
ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
ಯೋಹಾನನು 6 : 58 (KNV)
ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು.
ಯೋಹಾನನು 6 : 59 (KNV)
ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು.
ಯೋಹಾನನು 6 : 60 (KNV)
ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
ಯೋಹಾನನು 6 : 61 (KNV)
ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
ಯೋಹಾನನು 6 : 62 (KNV)
ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?
ಯೋಹಾನನು 6 : 63 (KNV)
ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
ಯೋಹಾನನು 6 : 64 (KNV)
ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
ಯೋಹಾನನು 6 : 65 (KNV)
ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.
ಯೋಹಾನನು 6 : 66 (KNV)
ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
ಯೋಹಾನನು 6 : 67 (KNV)
ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು
ಯೋಹಾನನು 6 : 68 (KNV)
ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
ಯೋಹಾನನು 6 : 69 (KNV)
ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
ಯೋಹಾನನು 6 : 70 (KNV)
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.
ಯೋಹಾನನು 6 : 71 (KNV)
ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68 69 70 71