ಯೋಹಾನನು 7 : 1 (KNV)
ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
ಯೋಹಾನನು 7 : 2 (KNV)
ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
ಯೋಹಾನನು 7 : 3 (KNV)
ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
ಯೋಹಾನನು 7 : 4 (KNV)
ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
ಯೋಹಾನನು 7 : 5 (KNV)
ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.
ಯೋಹಾನನು 7 : 6 (KNV)
ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
ಯೋಹಾನನು 7 : 7 (KNV)
ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
ಯೋಹಾನನು 7 : 8 (KNV)
ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.
ಯೋಹಾನನು 7 : 9 (KNV)
ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು.
ಯೋಹಾನನು 7 : 10 (KNV)
ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು.
ಯೋಹಾನನು 7 : 11 (KNV)
ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.
ಯೋಹಾನನು 7 : 12 (KNV)
ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
ಯೋಹಾನನು 7 : 13 (KNV)
ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
ಯೋಹಾನನು 7 : 14 (KNV)
ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು.
ಯೋಹಾನನು 7 : 15 (KNV)
ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
ಯೋಹಾನನು 7 : 16 (KNV)
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
ಯೋಹಾನನು 7 : 17 (KNV)
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ಯೋಹಾನನು 7 : 18 (KNV)
ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
ಯೋಹಾನನು 7 : 19 (KNV)
ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
ಯೋಹಾನನು 7 : 20 (KNV)
ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
ಯೋಹಾನನು 7 : 21 (KNV)
ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ
ಯೋಹಾನನು 7 : 22 (KNV)
ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.
ಯೋಹಾನನು 7 : 23 (KNV)
ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
ಯೋಹಾನನು 7 : 24 (KNV)
ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
ಯೋಹಾನನು 7 : 25 (KNV)
ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ?
ಯೋಹಾನನು 7 : 26 (KNV)
ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ?
ಯೋಹಾನನು 7 : 27 (KNV)
ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು.
ಯೋಹಾನನು 7 : 28 (KNV)
ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ.
ಯೋಹಾನನು 7 : 29 (KNV)
ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು.
ಯೋಹಾನನು 7 : 30 (KNV)
ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
ಯೋಹಾನನು 7 : 31 (KNV)
ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
ಯೋಹಾನನು 7 : 32 (KNV)
ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
ಯೋಹಾನನು 7 : 33 (KNV)
ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ.
ಯೋಹಾನನು 7 : 34 (KNV)
ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
ಯೋಹಾನನು 7 : 35 (KNV)
ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
ಯೋಹಾನನು 7 : 36 (KNV)
ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
ಯೋಹಾನನು 7 : 37 (KNV)
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಯೋಹಾನನು 7 : 38 (KNV)
ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
ಯೋಹಾನನು 7 : 39 (KNV)
(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
ಯೋಹಾನನು 7 : 40 (KNV)
ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು.
ಯೋಹಾನನು 7 : 41 (KNV)
ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
ಯೋಹಾನನು 7 : 42 (KNV)
ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
ಯೋಹಾನನು 7 : 43 (KNV)
ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;
ಯೋಹಾನನು 7 : 44 (KNV)
ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
ಯೋಹಾನನು 7 : 45 (KNV)
ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.
ಯೋಹಾನನು 7 : 46 (KNV)
ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
ಯೋಹಾನನು 7 : 47 (KNV)
ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?
ಯೋಹಾನನು 7 : 48 (KNV)
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
ಯೋಹಾನನು 7 : 49 (KNV)
ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು.
ಯೋಹಾನನು 7 : 50 (KNV)
ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)
ಯೋಹಾನನು 7 : 51 (KNV)
ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
ಯೋಹಾನನು 7 : 52 (KNV)
ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.
ಯೋಹಾನನು 7 : 53 (KNV)
ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53