ಯೆಹೋಶುವ 10 : 1 (KNV)
ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ
ಯೆಹೋಶುವ 10 : 2 (KNV)
ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.
ಯೆಹೋಶುವ 10 : 3 (KNV)
ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
ಯೆಹೋಶುವ 10 : 4 (KNV)
ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು.
ಯೆಹೋಶುವ 10 : 5 (KNV)
ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.
ಯೆಹೋಶುವ 10 : 6 (KNV)
ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
ಯೆಹೋಶುವ 10 : 7 (KNV)
ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು.
ಯೆಹೋಶುವ 10 : 8 (KNV)
ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
ಯೆಹೋಶುವ 10 : 9 (KNV)
ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು.
ಯೆಹೋಶುವ 10 : 10 (KNV)
ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
ಯೆಹೋಶುವ 10 : 11 (KNV)
ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
ಯೆಹೋಶುವ 10 : 12 (KNV)
ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
ಯೆಹೋಶುವ 10 : 13 (KNV)
ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.
ಯೆಹೋಶುವ 10 : 14 (KNV)
ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.
ಯೆಹೋಶುವ 10 : 15 (KNV)
ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.
ಯೆಹೋಶುವ 10 : 16 (KNV)
ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.
ಯೆಹೋಶುವ 10 : 17 (KNV)
ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು.
ಯೆಹೋಶುವ 10 : 18 (KNV)
ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.
ಯೆಹೋಶುವ 10 : 19 (KNV)
ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.
ಯೆಹೋಶುವ 10 : 20 (KNV)
ಯೆಹೋಶುವನೂ ಇಸ್ರಾಯೇಲ್ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು.
ಯೆಹೋಶುವ 10 : 21 (KNV)
ಜನರೆಲ್ಲಾ ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸಮಾಧಾನದಿಂದ ಹಿಂತಿರುಗಿ ಬಂದರು; ಇಸ್ರಾಯೇಲ್ ಮಕ್ಕಳಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಅಲ್ಲಾಡಿಸಲಿಲ್ಲ.
ಯೆಹೋಶುವ 10 : 22 (KNV)
ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು.
ಯೆಹೋಶುವ 10 : 23 (KNV)
ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.
ಯೆಹೋಶುವ 10 : 24 (KNV)
ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
ಯೆಹೋಶುವ 10 : 25 (KNV)
ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.
ಯೆಹೋಶುವ 10 : 26 (KNV)
ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.
ಯೆಹೋಶುವ 10 : 27 (KNV)
ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
ಯೆಹೋಶುವ 10 : 28 (KNV)
ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.
ಯೆಹೋಶುವ 10 : 29 (KNV)
ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.
ಯೆಹೋಶುವ 10 : 30 (KNV)
ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
ಯೆಹೋಶುವ 10 : 31 (KNV)
ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.
ಯೆಹೋಶುವ 10 : 32 (KNV)
ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.
ಯೆಹೋಶುವ 10 : 33 (KNV)
ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.
ಯೆಹೋಶುವ 10 : 34 (KNV)
ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ
ಯೆಹೋಶುವ 10 : 35 (KNV)
ಅದೇ ದಿನದಲ್ಲಿ ಅದನ್ನು ಹಿಡಿದು ಅದನ್ನು ಕತ್ತಿಯಿಂದ ಹೊಡೆದರು. ಅವನು ಲಾಕೀಷಿಗೆ ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿ ಅದೇ ದಿನದಲ್ಲಿ ಅದರಲ್ಲಿರುವ ಸಕಲ ಪ್ರಾಣಗಳನ್ನು ಸಂಪೂರ್ಣವಾಗಿ ನಾಶಮಾಡಿದನು.
ಯೆಹೋಶುವ 10 : 36 (KNV)
ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ
ಯೆಹೋಶುವ 10 : 37 (KNV)
ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು.
ಯೆಹೋಶುವ 10 : 38 (KNV)
ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ
ಯೆಹೋಶುವ 10 : 39 (KNV)
ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.
ಯೆಹೋಶುವ 10 : 40 (KNV)
ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
ಯೆಹೋಶುವ 10 : 41 (KNV)
ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.
ಯೆಹೋಶುವ 10 : 42 (KNV)
ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.
ಯೆಹೋಶುವ 10 : 43 (KNV)
ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43