ಯೆಹೋಶುವ 11 : 1 (KNV)
ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ
ಯೆಹೋಶುವ 11 : 2 (KNV)
ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
ಯೆಹೋಶುವ 11 : 3 (KNV)
ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.
ಯೆಹೋಶುವ 11 : 4 (KNV)
ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.
ಯೆಹೋಶುವ 11 : 5 (KNV)
ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು.
ಯೆಹೋಶುವ 11 : 6 (KNV)
ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
ಯೆಹೋಶುವ 11 : 7 (KNV)
ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು.
ಯೆಹೋಶುವ 11 : 8 (KNV)
ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
ಯೆಹೋಶುವ 11 : 9 (KNV)
ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.
ಯೆಹೋಶುವ 11 : 10 (KNV)
ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.
ಯೆಹೋಶುವ 11 : 11 (KNV)
ಅವರು ಶ್ವಾಸವುಳ್ಳ ಒಂದನ್ನಾದರೂ ಉಳಿಸದೆ ಅದರಲ್ಲಿರುವ ಪ್ರಾಣಗಳನ್ನೆಲ್ಲಾ ಕತ್ತಿಯಿಂದ ಹೊಡೆದು ಸಂಪೂರ್ಣವಾಗಿ ನಾಶಮಾಡಿ ಹಾಚೋರನ್ನು ಬೆಂಕಿ ಯಿಂದ ಸುಟ್ಟುಬಿಟ್ಟರು.
ಯೆಹೋಶುವ 11 : 12 (KNV)
ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.
ಯೆಹೋಶುವ 11 : 13 (KNV)
ಆದರೆ ತಮ್ಮ ದಿನ್ನೆಯ ಮೇಲೆ ನಿಂತಿರುವ ಪಟ್ಟಣ ಗಳನ್ನೆಲ್ಲಾ ಇಸ್ರಾಯೇಲ್ ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟು ಬಿಟ್ಟನು.
ಯೆಹೋಶುವ 11 : 14 (KNV)
ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.
ಯೆಹೋಶುವ 11 : 15 (KNV)
ಕರ್ತನು ತನ್ನ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿ ದನು. ಯೆಹೋಶುವನು ಹಾಗೆಯೇ ಮಾಡಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಅವನು ಮಾಡದೆ ಉಳಿಸಲಿಲ್ಲ.
ಯೆಹೋಶುವ 11 : 16 (KNV)
ಈ ಪ್ರಕಾರ ಯೆಹೋಶುವನು ಸೇಯಾರಿಗೆ ಏರಿ ಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ತಗ್ಗಿನಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ಎಲ್ಲಾ
ಯೆಹೋಶುವ 11 : 17 (KNV)
ಗೋಷೆನ್ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
ಯೆಹೋಶುವ 11 : 18 (KNV)
ಯೆಹೋಶುವನು ಬಹಳಕಾಲ ಈ ಅರಸುಗಳೆಲ್ಲರ ಸಂಗಡ ಯುದ್ಧಮಾಡುತ್ತಿದ್ದನು.
ಯೆಹೋಶುವ 11 : 19 (KNV)
ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು.
ಯೆಹೋಶುವ 11 : 20 (KNV)
ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
ಯೆಹೋಶುವ 11 : 21 (KNV)
ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.
ಯೆಹೋಶುವ 11 : 22 (KNV)
ಅನಾಕ್ಯರು ಇಸ್ರಾಯೇಲ್ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.
ಯೆಹೋಶುವ 11 : 23 (KNV)
ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.

1 2 3 4 5 6 7 8 9 10 11 12 13 14 15 16 17 18 19 20 21 22 23