ಯೆಹೋಶುವ 14 : 1 (KNV)
ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.
ಯೆಹೋಶುವ 14 : 2 (KNV)
ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
ಯೆಹೋಶುವ 14 : 3 (KNV)
ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
ಯೆಹೋಶುವ 14 : 4 (KNV)
ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
ಯೆಹೋಶುವ 14 : 5 (KNV)
ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.
ಯೆಹೋಶುವ 14 : 6 (KNV)
ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
ಯೆಹೋಶುವ 14 : 7 (KNV)
ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.
ಯೆಹೋಶುವ 14 : 8 (KNV)
ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
ಯೆಹೋಶುವ 14 : 9 (KNV)
ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
ಯೆಹೋಶುವ 14 : 10 (KNV)
ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.
ಯೆಹೋಶುವ 14 : 11 (KNV)
ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.
ಯೆಹೋಶುವ 14 : 12 (KNV)
ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.
ಯೆಹೋಶುವ 14 : 13 (KNV)
ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
ಯೆಹೋಶುವ 14 : 14 (KNV)
ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.
ಯೆಹೋಶುವ 14 : 15 (KNV)
ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
❮
❯
1
2
3
4
5
6
7
8
9
10
11
12
13
14
15