ಯೆಹೋಶುವ 18 : 1 (KNV)
ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
ಯೆಹೋಶುವ 18 : 2 (KNV)
ಆದರೆ ಇಸ್ರಾಯೇಲ್‌ ಮಕ್ಕಳಲ್ಲಿ ತಮ್ಮ ಬಾಧ್ಯತೆ ಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.
ಯೆಹೋಶುವ 18 : 3 (KNV)
ಯೆಹೋಶುವನು ಇಸ್ರಾಯೇಲ್‌ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
ಯೆಹೋಶುವ 18 : 4 (KNV)
ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು.
ಯೆಹೋಶುವ 18 : 5 (KNV)
ಅದನ್ನು ಅವರು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೂದಗೋತ್ರದವರೂ ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲಸಬೇಕು.
ಯೆಹೋಶುವ 18 : 6 (KNV)
ನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು.
ಯೆಹೋಶುವ 18 : 7 (KNV)
ಆದರೆ ಲೇವಿಯರಿಗೆ ನಿಮ್ಮ ಸಂಗಡ ಪಾಲಿಲ್ಲ; ಅವರಿಗೆ ಕರ್ತನ ಯಾಜಕತ್ವವೇ ಅವರ ಬಾಧ್ಯತೆಯಾಗಿದೆ. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನಿನ ಆಚೆ ಮೂಡಣ ದಿಕ್ಕಿನಲ್ಲಿ ಕರ್ತನ ಸೇವಕನಾದ ಮೋಶೆಯು ಕೊಟ್ಟ ತಮ್ಮ ಬಾಧ್ಯತೆಯನ್ನು ತಕ್ಕೊಂಡಿದ್ದಾರೆ ಅಂದನು.
ಯೆಹೋಶುವ 18 : 8 (KNV)
ಆ ಮನುಷ್ಯರು ಹೊರಟುಹೋದರು. ಯೆಹೋಶುವನು ದೇಶವನ್ನು ವಿವರಿಸುವದಕ್ಕಾಗಿ ಹೋದವರಿಗೆ ಅಪ್ಪಣೆ ಕೊಟ್ಟು--ನೀವು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಅದರ ವಿವರಣೆಯನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿ; ನಾನು ಶೀಲೋವಿನಲ್ಲಿ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ತಿರಿಗಿ ಬರಲಿ ಎಂದು ಹೇಳಿದನು.
ಯೆಹೋಶುವ 18 : 9 (KNV)
ಆ ಮನುಷ್ಯರು ಆ ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು.
ಯೆಹೋಶುವ 18 : 10 (KNV)
ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್‌ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.
ಯೆಹೋಶುವ 18 : 11 (KNV)
ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.
ಯೆಹೋಶುವ 18 : 12 (KNV)
ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿ ನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆ ನಿನ ಅರಣ್ಯಕ್ಕೆ ಮುಗಿಯುವದು.
ಯೆಹೋಶುವ 18 : 13 (KNV)
ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್‌ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.
ಯೆಹೋಶುವ 18 : 14 (KNV)
ಇದಲ್ಲದೆ ಆ ಮೇರೆಯು ದಕ್ಷಿಣ ಮೂಲೆಗೆ ಎದುರಾಗಿರುವ ಬೇತ್‌ಹೋರೋನಿಗೆ ಎದುರಾದ ಬೆಟ್ಟವನ್ನು ಹಿಡಿದು ದಕ್ಷಿಣವಾಗಿ ಸಮುದ್ರದ ಮೂಲೆಯನ್ನು ಸುತ್ತಿಕೊಂಡು ಕಿರ್ಯತ್ಯಾರೀಮ್‌ ಎಂಬ ಯೂದನ ಮಕ್ಕಳ ಪಟ್ಟಣವಾದ ಕಿರ್ಯತ್‌ ಬಾಳದ ಬಳಿಗೆ ಹೋಗಿ ಮುಗಿಯುವದು. ಇದು ಪಶ್ಚಿಮ ಮೂಲೆಯಾಗಿತ್ತು.
ಯೆಹೋಶುವ 18 : 15 (KNV)
ಆ ಮೇರೆಯಾದ ದಕ್ಷಿಣ ಮೂಲೆಯು ಕಿರ್ಯತ್ಯಾರೀಮ್‌ ತುದಿಯಿಂದ ಹೊರಟು ಪಶ್ಚಿಮಕ್ಕೆ ಹೋಗಿ ನೆಫ್ತೋಹದ ಜಲಬುಗ್ಗೆಯ ಪರಿಯಂತರ ಹೊರಟು
ಯೆಹೋಶುವ 18 : 16 (KNV)
ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್‌ರೋಗೆಲಿಗೂ ಏರಿ
ಯೆಹೋಶುವ 18 : 17 (KNV)
ಅಲ್ಲಿಂದ ಉತ್ತರಕ್ಕೆ ಹೋಗಿ ಏನ್‌ಷೆಮೆಸ್‌ಗೂ ಅಲ್ಲಿಂದ ಅದುವಿಾಮ್‌ ಎಂಬ ಕೊಳ್ಳಿಗೆ ಎದುರಾದ ಗೆಲೀಲೋತಿಗೂ ಅಲ್ಲಿಂದ ರೂಬೇನನ ಕುಮಾರನಾದ ಬೋಹನನ ಬಂಡೆಗಲ್ಲು ಏರಿ ಹೋಗಿ
ಯೆಹೋಶುವ 18 : 18 (KNV)
ಅಲ್ಲಿಂದ ಅರಾಬಾಕ್ಕೆ ಎದುರಾಗಿ ಉತ್ತರ ಭಾಗಕ್ಕೆಹೊರಟು ಅರಾಬಾಕ್ಕೆ ಇಳಿದು ಬಂದು
ಯೆಹೋಶುವ 18 : 19 (KNV)
ಅಲ್ಲಿಂದ ಆ ಮೇರೆ ಬೇತ್‌ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ.
ಯೆಹೋಶುವ 18 : 20 (KNV)
ಮೂಡಣ ಭಾಗದಲ್ಲಿ ಯೊರ್ದನ್‌ ಅದರ ಮೇರೆ ಯಾಗಿತ್ತು. ಇದು ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಒಳಗಿರುವ ಬಾಧ್ಯತೆಯಾಗಿತ್ತು.
ಯೆಹೋಶುವ 18 : 21 (KNV)
ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್‌ಹೋಗ್ಲಾ, ಕೆಚ್ಚೀಚ್‌ ತಗ್ಗು
ಯೆಹೋಶುವ 18 : 22 (KNV)
ಬೇತ್‌ಅರಾಬಾ, ಚೆಮಾರಯಿಮ್‌, ಬೇತೇಲ್‌,
ಯೆಹೋಶುವ 18 : 23 (KNV)
ಅವ್ವೀಮ್‌, ಪಾರಾ, ಒಫ್ರಾ, ಅಮ್ಮೋನ್ಯ,
ಯೆಹೋಶುವ 18 : 24 (KNV)
ಕೆಫೆರ್‌, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ
ಯೆಹೋಶುವ 18 : 25 (KNV)
ಗಿಬ್ಯೋನ್‌, ರಾಮಾ; ಬೇರೋತ್‌,
ಯೆಹೋಶುವ 18 : 26 (KNV)
ಮಿಚ್ಪೆ, ಕೆಫೀರಾ, ಮೋಚಾ,
ಯೆಹೋಶುವ 18 : 27 (KNV)
ರೆಕೆಮ್‌, ಇರ್ಪೇಲ್‌, ತರಲಾ,ಚೇಲ, ಎಲೆಫ್‌, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್‌, ಕಿರ್ಯತ್‌ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
ಯೆಹೋಶುವ 18 : 28 (KNV)
ಚೇಲ, ಎಲೆಫ್‌, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್‌, ಕಿರ್ಯತ್‌ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: