ಯೆಹೋಶುವ 9 : 1 (KNV)
ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,
ಯೆಹೋಶುವ 9 : 2 (KNV)
ಅವರು ಯೆಹೋಶುವನ ಸಂಗಡವೂ ಇಸ್ರಾಯೇಲ್ಯರ ಸಂಗಡವೂ ಯುದ್ಧ ಮಾಡುವದಕ್ಕೆ ಒಟ್ಟಾಗಿ ಕೂಡಿಕೊಂಡರು.
ಯೆಹೋಶುವ 9 : 3 (KNV)
ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
ಯೆಹೋಶುವ 9 : 4 (KNV)
ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು
ಯೆಹೋಶುವ 9 : 5 (KNV)
ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು
ಯೆಹೋಶುವ 9 : 6 (KNV)
ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
ಯೆಹೋಶುವ 9 : 7 (KNV)
ಆಗ ಇಸ್ರಾಯೇಲ್ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.
ಯೆಹೋಶುವ 9 : 8 (KNV)
ಅದಕ್ಕವರು ಯೆಹೋಶುವನಿಗೆ--ನಾವು ನಿನ್ನ ಸೇವ ಕರು ಅಂದರು. ಆಗ ಯೆಹೋಶುವನು ಅವರಿಗೆ-- ನೀವು ಯಾರು, ಎಲ್ಲಿಂದ ಬಂದಿರಿ ಅಂದನು.
ಯೆಹೋಶುವ 9 : 9 (KNV)
ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
ಯೆಹೋಶುವ 9 : 10 (KNV)
ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.
ಯೆಹೋಶುವ 9 : 11 (KNV)
ನಮ್ಮ ಹಿರಿಯರೂ ನಮ್ಮ ದೇಶ ನಿವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇ ನಂದರೆ--ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದು ಕೊಂಡು ಅವರೆದುರಿಗೆ ಹೋಗಿ ಅವರಿಗೆ--ನಾವು ನಿಮ್ಮ ಸೇವಕರು; ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಎಂದು ಹೇಳಿರಿ ಅಂದರು.
ಯೆಹೋಶುವ 9 : 12 (KNV)
ನಾವು ನಿಮ್ಮ ಬಳಿಗೆ ಹೊರಟ ದಿನದಲ್ಲಿ ನಮ್ಮ ಪ್ರಯಾಣಕ್ಕೆ ಮನೆಯಿಂದ ಬಿಸಿ ರೊಟ್ಟಿಗಳನ್ನು ತೆಗೆದು ಕೊಂಡಿದ್ದೆವು; ಆದರೆ ಈಗ ಅವು ಒಣಗಿಹೋಗಿವೆ.
ಯೆಹೋಶುವ 9 : 13 (KNV)
ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು.
ಯೆಹೋಶುವ 9 : 14 (KNV)
ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
ಯೆಹೋಶುವ 9 : 15 (KNV)
ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
ಯೆಹೋಶುವ 9 : 16 (KNV)
ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ ತಮ್ಮಲ್ಲಿ ಇರುವವರೆಂದೂ ಕೇಳಿ ದರು.
ಯೆಹೋಶುವ 9 : 17 (KNV)
ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಅವರ ಪಟ್ಟಣ ಗಳಿಗೆ ಬಂದರು.
ಯೆಹೋಶುವ 9 : 18 (KNV)
ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.
ಯೆಹೋಶುವ 9 : 19 (KNV)
ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು.
ಯೆಹೋಶುವ 9 : 20 (KNV)
ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
ಯೆಹೋಶುವ 9 : 21 (KNV)
ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
ಯೆಹೋಶುವ 9 : 22 (KNV)
ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು?
ಯೆಹೋಶುವ 9 : 23 (KNV)
ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
ಯೆಹೋಶುವ 9 : 24 (KNV)
ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.
ಯೆಹೋಶುವ 9 : 25 (KNV)
ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.
ಯೆಹೋಶುವ 9 : 26 (KNV)
ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟು
ಯೆಹೋಶುವ 9 : 27 (KNV)
ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27