ಯೂದನು 1 : 1 (KNV)
ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
ಯೂದನು 1 : 2 (KNV)
ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.
ಯೂದನು 1 : 3 (KNV)
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
ಯೂದನು 1 : 4 (KNV)
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
ಯೂದನು 1 : 5 (KNV)
ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
ಯೂದನು 1 : 6 (KNV)
ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
ಯೂದನು 1 : 7 (KNV)
ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
ಯೂದನು 1 : 8 (KNV)
ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
ಯೂದನು 1 : 9 (KNV)
ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
ಯೂದನು 1 : 10 (KNV)
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
ಯೂದನು 1 : 11 (KNV)
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
ಯೂದನು 1 : 12 (KNV)
ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
ಯೂದನು 1 : 13 (KNV)
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
ಯೂದನು 1 : 14 (KNV)
ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
ಯೂದನು 1 : 15 (KNV)
ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
ಯೂದನು 1 : 16 (KNV)
ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
ಯೂದನು 1 : 17 (KNV)
ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
ಯೂದನು 1 : 18 (KNV)
ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
ಯೂದನು 1 : 19 (KNV)
ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
ಯೂದನು 1 : 20 (KNV)
ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
ಯೂದನು 1 : 21 (KNV)
ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
ಯೂದನು 1 : 22 (KNV)
ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ.
ಯೂದನು 1 : 23 (KNV)
ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
ಯೂದನು 1 : 24 (KNV)
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವ
ಯೂದನು 1 : 25 (KNV)
ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
❮
❯