ನ್ಯಾಯಸ್ಥಾಪಕರು 14 : 1 (KNV)
ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ
ನ್ಯಾಯಸ್ಥಾಪಕರು 14 : 2 (KNV)
ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.
ನ್ಯಾಯಸ್ಥಾಪಕರು 14 : 3 (KNV)
ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.
ನ್ಯಾಯಸ್ಥಾಪಕರು 14 : 4 (KNV)
ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
ನ್ಯಾಯಸ್ಥಾಪಕರು 14 : 5 (KNV)
ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.
ನ್ಯಾಯಸ್ಥಾಪಕರು 14 : 6 (KNV)
ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
ನ್ಯಾಯಸ್ಥಾಪಕರು 14 : 7 (KNV)
ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾ ಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾ ಗಿದ್ದಳು.
ನ್ಯಾಯಸ್ಥಾಪಕರು 14 : 8 (KNV)
ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು.
ನ್ಯಾಯಸ್ಥಾಪಕರು 14 : 9 (KNV)
ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.
ನ್ಯಾಯಸ್ಥಾಪಕರು 14 : 10 (KNV)
ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.
ನ್ಯಾಯಸ್ಥಾಪಕರು 14 : 11 (KNV)
ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.
ನ್ಯಾಯಸ್ಥಾಪಕರು 14 : 12 (KNV)
ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.
ನ್ಯಾಯಸ್ಥಾಪಕರು 14 : 13 (KNV)
ಅದರ ಅರ್ಥವನ್ನು ನೀವು ನನಗೆ ಹೇಳದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತುವಸ್ತ್ರ ಗಳನ್ನೂ ಕೊಡಬೇಕು ಅಂದನು. ಅವರು ಅವನಿಗೆನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ ಅಂದರು.
ನ್ಯಾಯಸ್ಥಾಪಕರು 14 : 14 (KNV)
ಆಗ ಅವನು ಅವರಿಗೆ--ತಿನ್ನುವಂಥದ್ದರಿಂದ ತಿನ್ನ ತಕ್ಕದ್ದು ಹೊರಟಿತು, ಬಲವಾದದ್ದರಿಂದ ಸಿಹಿಯು ಹೊರಟಿತು ಅಂದನು.
ನ್ಯಾಯಸ್ಥಾಪಕರು 14 : 15 (KNV)
ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.
ನ್ಯಾಯಸ್ಥಾಪಕರು 14 : 16 (KNV)
ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.
ನ್ಯಾಯಸ್ಥಾಪಕರು 14 : 17 (KNV)
ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.
ನ್ಯಾಯಸ್ಥಾಪಕರು 14 : 18 (KNV)
ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.
ನ್ಯಾಯಸ್ಥಾಪಕರು 14 : 19 (KNV)
ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.
ನ್ಯಾಯಸ್ಥಾಪಕರು 14 : 20 (KNV)
ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
❮
❯