ನ್ಯಾಯಸ್ಥಾಪಕರು 3 : 1 (KNV)
ಕಾನಾನ್‌ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ
ನ್ಯಾಯಸ್ಥಾಪಕರು 3 : 2 (KNV)
ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್‌ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ:
ನ್ಯಾಯಸ್ಥಾಪಕರು 3 : 3 (KNV)
ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್‌ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
ನ್ಯಾಯಸ್ಥಾಪಕರು 3 : 4 (KNV)
ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
ನ್ಯಾಯಸ್ಥಾಪಕರು 3 : 5 (KNV)
ಇಸ್ರಾಯೇಲ್‌ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು
ನ್ಯಾಯಸ್ಥಾಪಕರು 3 : 6 (KNV)
ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.
ನ್ಯಾಯಸ್ಥಾಪಕರು 3 : 7 (KNV)
ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
ನ್ಯಾಯಸ್ಥಾಪಕರು 3 : 8 (KNV)
ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್‌ ರಿಷಾತಯಿಮ್‌ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್‌ ಮಕ್ಕಳು ಕೂಷನ್‌ರಿಷಾತಯಿಮ್‌ನ್ನು ಎಂಟು ವರುಷ ಸೇವಿಸಿದರು.
ನ್ಯಾಯಸ್ಥಾಪಕರು 3 : 9 (KNV)
ತರುವಾಯ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
ನ್ಯಾಯಸ್ಥಾಪಕರು 3 : 10 (KNV)
ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್‌ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್‌ರಿಷಾತಯಿಮಿನ ಮೇಲೆ ಬಲವಾಯಿತು.
ನ್ಯಾಯಸ್ಥಾಪಕರು 3 : 11 (KNV)
ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
ನ್ಯಾಯಸ್ಥಾಪಕರು 3 : 12 (KNV)
ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
ನ್ಯಾಯಸ್ಥಾಪಕರು 3 : 13 (KNV)
ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
ನ್ಯಾಯಸ್ಥಾಪಕರು 3 : 14 (KNV)
ಇಸ್ರಾಯೇಲ್‌ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.
ನ್ಯಾಯಸ್ಥಾಪಕರು 3 : 15 (KNV)
ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
ನ್ಯಾಯಸ್ಥಾಪಕರು 3 : 16 (KNV)
ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
ನ್ಯಾಯಸ್ಥಾಪಕರು 3 : 17 (KNV)
ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.
ನ್ಯಾಯಸ್ಥಾಪಕರು 3 : 18 (KNV)
ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು
ನ್ಯಾಯಸ್ಥಾಪಕರು 3 : 19 (KNV)
ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.
ನ್ಯಾಯಸ್ಥಾಪಕರು 3 : 20 (KNV)
ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
ನ್ಯಾಯಸ್ಥಾಪಕರು 3 : 21 (KNV)
ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.
ನ್ಯಾಯಸ್ಥಾಪಕರು 3 : 22 (KNV)
ಅದು ಅಲಗೂ ಹಿಡಿಯೂ ಅವನ ಹೊಟ್ಟೆಯಲ್ಲಿ ಹೊಕ್ಕು ಕಿತ್ತು ತೆಗೆಯ ಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು.
ನ್ಯಾಯಸ್ಥಾಪಕರು 3 : 23 (KNV)
ಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು.
ನ್ಯಾಯಸ್ಥಾಪಕರು 3 : 24 (KNV)
ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು
ನ್ಯಾಯಸ್ಥಾಪಕರು 3 : 25 (KNV)
ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.
ನ್ಯಾಯಸ್ಥಾಪಕರು 3 : 26 (KNV)
ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.
ನ್ಯಾಯಸ್ಥಾಪಕರು 3 : 27 (KNV)
ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್‌ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
ನ್ಯಾಯಸ್ಥಾಪಕರು 3 : 28 (KNV)
ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ
ನ್ಯಾಯಸ್ಥಾಪಕರು 3 : 29 (KNV)
ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.
ನ್ಯಾಯಸ್ಥಾಪಕರು 3 : 30 (KNV)
ಹೀಗೆ ಆ ದಿನದಲ್ಲಿ ಮೋವಾಬ್‌ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
ನ್ಯಾಯಸ್ಥಾಪಕರು 3 : 31 (KNV)
ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: