ಪ್ರಲಾಪಗಳು 3 : 1 (KNV)
ಆತನ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ.
ಪ್ರಲಾಪಗಳು 3 : 2 (KNV)
ಆತನು ನನ್ನನ್ನು ಕರೆತಂದು ನಡಿಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ.
ಪ್ರಲಾಪಗಳು 3 : 3 (KNV)
ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ.
ಪ್ರಲಾಪಗಳು 3 : 4 (KNV)
ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ.
ಪ್ರಲಾಪಗಳು 3 : 5 (KNV)
ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ.
ಪ್ರಲಾಪಗಳು 3 : 6 (KNV)
ಆತನು ನನ್ನನ್ನು ಬಹು ಕಾಲದ ಹಿಂದೆ ಸತ್ತವರ ಹಾಗೆ ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾನೆ.
ಪ್ರಲಾಪಗಳು 3 : 7 (KNV)
ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ.
ಪ್ರಲಾಪಗಳು 3 : 8 (KNV)
ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
ಪ್ರಲಾಪಗಳು 3 : 9 (KNV)
ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ ಆತನು ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.
ಪ್ರಲಾಪಗಳು 3 : 10 (KNV)
ಆತನು ನನಗೆ ಹೊಂಚುಹಾಕುವ ಕರಡಿಯ ಹಾಗೆಯೂ ಗುಪ್ತಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾನೆ.
ಪ್ರಲಾಪಗಳು 3 : 11 (KNV)
ಆತನು ನನ್ನ ಮಾರ್ಗಗಳನ್ನು ತಪ್ಪಿಸಿ ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ ಹಾಳುಮಾಡಿದ್ದಾನೆ.
ಪ್ರಲಾಪಗಳು 3 : 12 (KNV)
ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
ಪ್ರಲಾಪಗಳು 3 : 13 (KNV)
ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.
ಪ್ರಲಾಪಗಳು 3 : 14 (KNV)
ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ.
ಪ್ರಲಾಪಗಳು 3 : 15 (KNV)
ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.
ಪ್ರಲಾಪಗಳು 3 : 16 (KNV)
ಆತನು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು ನನ್ನನ್ನು ಬೂದಿಯಿಂದ ಮುಚ್ಚಿದ್ದಾನೆ.
ಪ್ರಲಾಪಗಳು 3 : 17 (KNV)
ನನ್ನ ಪ್ರಾಣವನ್ನು ಸಮಾಧಾನದಿಂದ ದೂರಮಾಡಿದ್ದಾನೆ; ನಾನು ಏಳಿಗೆಯನ್ನು ಮರೆತುಬಿಟ್ಟೆನು.
ಪ್ರಲಾಪಗಳು 3 : 18 (KNV)
ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
ಪ್ರಲಾಪಗಳು 3 : 19 (KNV)
ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು.
ಪ್ರಲಾಪಗಳು 3 : 20 (KNV)
ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.
ಪ್ರಲಾಪಗಳು 3 : 21 (KNV)
ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
ಪ್ರಲಾಪಗಳು 3 : 22 (KNV)
ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
ಪ್ರಲಾಪಗಳು 3 : 23 (KNV)
ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
ಪ್ರಲಾಪಗಳು 3 : 24 (KNV)
ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ.
ಪ್ರಲಾಪಗಳು 3 : 25 (KNV)
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ಪ್ರಲಾಪಗಳು 3 : 26 (KNV)
ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
ಪ್ರಲಾಪಗಳು 3 : 27 (KNV)
ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು.
ಪ್ರಲಾಪಗಳು 3 : 28 (KNV)
ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ.
ಪ್ರಲಾಪಗಳು 3 : 29 (KNV)
ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
ಪ್ರಲಾಪಗಳು 3 : 30 (KNV)
ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
ಪ್ರಲಾಪಗಳು 3 : 31 (KNV)
ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ;
ಪ್ರಲಾಪಗಳು 3 : 32 (KNV)
ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
ಪ್ರಲಾಪಗಳು 3 : 33 (KNV)
ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ.
ಪ್ರಲಾಪಗಳು 3 : 34 (KNV)
ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವದನ್ನೂ
ಪ್ರಲಾಪಗಳು 3 : 35 (KNV)
ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ತಿರುಗಿಸು ವದನ್ನೂ
ಪ್ರಲಾಪಗಳು 3 : 36 (KNV)
ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.
ಪ್ರಲಾಪಗಳು 3 : 37 (KNV)
ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
ಪ್ರಲಾಪಗಳು 3 : 38 (KNV)
ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
ಪ್ರಲಾಪಗಳು 3 : 39 (KNV)
ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?
ಪ್ರಲಾಪಗಳು 3 : 40 (KNV)
ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
ಪ್ರಲಾಪಗಳು 3 : 41 (KNV)
ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
ಪ್ರಲಾಪಗಳು 3 : 42 (KNV)
ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
ಪ್ರಲಾಪಗಳು 3 : 43 (KNV)
ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ.
ಪ್ರಲಾಪಗಳು 3 : 44 (KNV)
ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
ಪ್ರಲಾಪಗಳು 3 : 45 (KNV)
ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ.
ಪ್ರಲಾಪಗಳು 3 : 46 (KNV)
ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ.
ಪ್ರಲಾಪಗಳು 3 : 47 (KNV)
ಭಯವೂ ಬೋನೂ ನಾಶನವೂ ಸಂಹಾರವೂ ನಮ್ಮ ಮೇಲೆ ಬಂದಿವೆ.
ಪ್ರಲಾಪಗಳು 3 : 48 (KNV)
ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ.
ಪ್ರಲಾಪಗಳು 3 : 49 (KNV)
ಕರ್ತನು ಕಟಾಕ್ಷಿಸಿ ಪರಲೋಕದಿಂದ ನೋಡುವ ತನಕ ನೇತ್ರವು ಎಡೆಬಿಡದೆ ಕಣ್ಣೀರು ಸುರಿಸುತ್ತದೆ;
ಪ್ರಲಾಪಗಳು 3 : 50 (KNV)
ವಿಶ್ರಮಿಸಿಕೊಳ್ಳುವದೂ ಇಲ್ಲ.
ಪ್ರಲಾಪಗಳು 3 : 51 (KNV)
ನನ್ನ ನಗರದ ಕುಮಾರ್ತೆಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣು ನನ್ನ ಹೃದಯವನ್ನು ಪೀಡಿಸಿದೆ.
ಪ್ರಲಾಪಗಳು 3 : 52 (KNV)
ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
ಪ್ರಲಾಪಗಳು 3 : 53 (KNV)
ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
ಪ್ರಲಾಪಗಳು 3 : 54 (KNV)
ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
ಪ್ರಲಾಪಗಳು 3 : 55 (KNV)
ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
ಪ್ರಲಾಪಗಳು 3 : 56 (KNV)
ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ.
ಪ್ರಲಾಪಗಳು 3 : 57 (KNV)
ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸವಿಾಪಕ್ಕೆ ಬಂದು--ಭಯಪಡ ಬೇಡ ಎಂದು ಹೇಳಿದಿ.
ಪ್ರಲಾಪಗಳು 3 : 58 (KNV)
ಓ ಕರ್ತನೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡಿಸಿ ನನ್ನ ಜೀವವನ್ನು ವಿಮೋಚಿಸಿದ್ದೀ.
ಪ್ರಲಾಪಗಳು 3 : 59 (KNV)
ಓ ಕರ್ತನೇ, ನೀನು ನನ್ನ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯವನ್ನು ತೀರಿಸು.
ಪ್ರಲಾಪಗಳು 3 : 60 (KNV)
ಅವರ ಎಲ್ಲಾ ಪ್ರತೀಕಾರವನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನೀನು ನೋಡಿರುವಿ.
ಪ್ರಲಾಪಗಳು 3 : 61 (KNV)
ಓ ಕರ್ತನೇ, ಅವರ ನಿಂದೆಯನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ
ಪ್ರಲಾಪಗಳು 3 : 62 (KNV)
ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿ.
ಪ್ರಲಾಪಗಳು 3 : 63 (KNV)
ಅವರು ಕೂಡ್ರುವದನ್ನೂ ಏಳುವದನ್ನೂ ನೋಡು; ನಾನೇ ಅವರಿಗೆ ಸಂಗೀತವಾಗಿದ್ದೇನೆ.
ಪ್ರಲಾಪಗಳು 3 : 64 (KNV)
ಓ ಕರ್ತನೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡು.
ಪ್ರಲಾಪಗಳು 3 : 65 (KNV)
ಅವರಿಗೆ ದುಃಖಕರವಾದ ಹೃದಯವನ್ನೂ ನಿನ್ನ ಶಾಪವನ್ನೂ ಕೊಡು.
ಪ್ರಲಾಪಗಳು 3 : 66 (KNV)
ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66