ಪ್ರಲಾಪಗಳು 4 : 1 (KNV)
ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
ಪ್ರಲಾಪಗಳು 4 : 2 (KNV)
ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
ಪ್ರಲಾಪಗಳು 4 : 3 (KNV)
ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.
ಪ್ರಲಾಪಗಳು 4 : 4 (KNV)
ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ಪ್ರಲಾಪಗಳು 4 : 5 (KNV)
ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.
ಪ್ರಲಾಪಗಳು 4 : 6 (KNV)
ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.
ಪ್ರಲಾಪಗಳು 4 : 7 (KNV)
ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು.
ಪ್ರಲಾಪಗಳು 4 : 8 (KNV)
ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ.
ಪ್ರಲಾಪಗಳು 4 : 9 (KNV)
ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
ಪ್ರಲಾಪಗಳು 4 : 10 (KNV)
ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
ಪ್ರಲಾಪಗಳು 4 : 11 (KNV)
ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
ಪ್ರಲಾಪಗಳು 4 : 12 (KNV)
ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
ಪ್ರಲಾಪಗಳು 4 : 13 (KNV)
ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
ಪ್ರಲಾಪಗಳು 4 : 14 (KNV)
ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
ಪ್ರಲಾಪಗಳು 4 : 15 (KNV)
ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
ಪ್ರಲಾಪಗಳು 4 : 16 (KNV)
ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
ಪ್ರಲಾಪಗಳು 4 : 17 (KNV)
ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
ಪ್ರಲಾಪಗಳು 4 : 18 (KNV)
ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.
ಪ್ರಲಾಪಗಳು 4 : 19 (KNV)
ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.
ಪ್ರಲಾಪಗಳು 4 : 20 (KNV)
ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
ಪ್ರಲಾಪಗಳು 4 : 21 (KNV)
ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.
ಪ್ರಲಾಪಗಳು 4 : 22 (KNV)
ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.

1 2 3 4 5 6 7 8 9 10 11 12 13 14 15 16 17 18 19 20 21 22