ಯಾಜಕಕಾಂಡ 1 : 1 (KNV)
ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
ಯಾಜಕಕಾಂಡ 1 : 2 (KNV)
ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
ಯಾಜಕಕಾಂಡ 1 : 3 (KNV)
ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
ಯಾಜಕಕಾಂಡ 1 : 4 (KNV)
ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
ಯಾಜಕಕಾಂಡ 1 : 5 (KNV)
ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ಯಾಜಕಕಾಂಡ 1 : 6 (KNV)
ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು.
ಯಾಜಕಕಾಂಡ 1 : 7 (KNV)
ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
ಯಾಜಕಕಾಂಡ 1 : 8 (KNV)
ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು;
ಯಾಜಕಕಾಂಡ 1 : 9 (KNV)
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
ಯಾಜಕಕಾಂಡ 1 : 10 (KNV)
ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
ಯಾಜಕಕಾಂಡ 1 : 11 (KNV)
ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ಯಾಜಕಕಾಂಡ 1 : 12 (KNV)
ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು.
ಯಾಜಕಕಾಂಡ 1 : 13 (KNV)
ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
ಯಾಜಕಕಾಂಡ 1 : 14 (KNV)
ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
ಯಾಜಕಕಾಂಡ 1 : 15 (KNV)
ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
ಯಾಜಕಕಾಂಡ 1 : 16 (KNV)
ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.
ಯಾಜಕಕಾಂಡ 1 : 17 (KNV)
ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.

1 2 3 4 5 6 7 8 9 10 11 12 13 14 15 16 17

BG:

Opacity:

Color:


Size:


Font: