ಯಾಜಕಕಾಂಡ 21 : 1 (KNV)
ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
ಯಾಜಕಕಾಂಡ 21 : 2 (KNV)
ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿ, ತಂದೆ, ಮಗ, ಮಗಳು, ಸಹೋದರನಿಗಾಗಿ
ಯಾಜಕಕಾಂಡ 21 : 3 (KNV)
ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಅವನು ಹೊಲೆಯಾಗಬಹುದು.
ಯಾಜಕಕಾಂಡ 21 : 4 (KNV)
ಆದರೆ ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿ ರುವದರಿಂದ ತನ್ನನ್ನು ತಾನು ಹೊಲೆಮಾಡಿ ಕೊಳ್ಳಬಾರದು ಅಪವಿತ್ರಮಾಡಿಕೊಳ್ಳಲೂಬಾರದು.
ಯಾಜಕಕಾಂಡ 21 : 5 (KNV)
ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.
ಯಾಜಕಕಾಂಡ 21 : 6 (KNV)
ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.
ಯಾಜಕಕಾಂಡ 21 : 7 (KNV)
ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.
ಯಾಜಕಕಾಂಡ 21 : 8 (KNV)
ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
ಯಾಜಕಕಾಂಡ 21 : 9 (KNV)
ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.
ಯಾಜಕಕಾಂಡ 21 : 10 (KNV)
ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;
ಯಾಜಕಕಾಂಡ 21 : 11 (KNV)
ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
ಯಾಜಕಕಾಂಡ 21 : 12 (KNV)
ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
ಯಾಜಕಕಾಂಡ 21 : 13 (KNV)
ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು.
ಯಾಜಕಕಾಂಡ 21 : 14 (KNV)
ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
ಯಾಜಕಕಾಂಡ 21 : 15 (KNV)
ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
ಯಾಜಕಕಾಂಡ 21 : 16 (KNV)
ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
ಯಾಜಕಕಾಂಡ 21 : 17 (KNV)
ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.
ಯಾಜಕಕಾಂಡ 21 : 18 (KNV)
ಯಾವ ಮನುಷ್ಯನು ಕಳಂಕವುಳ್ಳವನಾಗಿರುತ್ತಾನೋ ಅಂದರೆ ಕಣ್ಣಿಲ್ಲದವನು ಇಲ್ಲವೆ ಕುಂಟನು ಚಪ್ಪಟೆ ಯಾದ ಮೂಗುಳ್ಳವನು ಹೆಚ್ಚಾದ ಅಂಗವುಳ್ಳವನು
ಯಾಜಕಕಾಂಡ 21 : 19 (KNV)
ಮುರಿದ ಪಾದವುಳ್ಳವನು ಮುರಿದ ಕೈಯುಳ್ಳವನು
ಯಾಜಕಕಾಂಡ 21 : 20 (KNV)
ಗೂನು ಬೆನ್ನುಳ್ಳವನು ಗಿಡ್ಡನು ಕಣ್ಣುಗಳಲ್ಲಿ ಕಳಂಕವುಳ್ಳವನು ಹುರುಕುಳ್ಳವನು ತುರಿಯುಳ್ಳವನು ತನ್ನ ಬೀಜಹೊಡೆದವನು
ಯಾಜಕಕಾಂಡ 21 : 21 (KNV)
ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು.
ಯಾಜಕಕಾಂಡ 21 : 22 (KNV)
ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
ಯಾಜಕಕಾಂಡ 21 : 23 (KNV)
ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ಯಾಜಕಕಾಂಡ 21 : 24 (KNV)
ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24