ಲೂಕನು 1 : 1 (KNV)
ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು
ಲೂಕನು 1 : 2 (KNV)
ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
ಲೂಕನು 1 : 3 (KNV)
ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
ಲೂಕನು 1 : 4 (KNV)
ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು.
ಲೂಕನು 1 : 5 (KNV)
ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್‌.
ಲೂಕನು 1 : 6 (KNV)
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
ಲೂಕನು 1 : 7 (KNV)
ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
ಲೂಕನು 1 : 8 (KNV)
ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
ಲೂಕನು 1 : 9 (KNV)
ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
ಲೂಕನು 1 : 10 (KNV)
ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
ಲೂಕನು 1 : 11 (KNV)
ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
ಲೂಕನು 1 : 12 (KNV)
ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
ಲೂಕನು 1 : 13 (KNV)
ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
ಲೂಕನು 1 : 14 (KNV)
ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
ಲೂಕನು 1 : 15 (KNV)
ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
ಲೂಕನು 1 : 16 (KNV)
ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
ಲೂಕನು 1 : 17 (KNV)
ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
ಲೂಕನು 1 : 18 (KNV)
ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
ಲೂಕನು 1 : 19 (KNV)
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
ಲೂಕನು 1 : 20 (KNV)
ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
ಲೂಕನು 1 : 21 (KNV)
ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
ಲೂಕನು 1 : 22 (KNV)
ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
ಲೂಕನು 1 : 23 (KNV)
ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು.
ಲೂಕನು 1 : 24 (KNV)
ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--
ಲೂಕನು 1 : 25 (KNV)
ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
ಲೂಕನು 1 : 26 (KNV)
ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
ಲೂಕನು 1 : 27 (KNV)
ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
ಲೂಕನು 1 : 28 (KNV)
ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
ಲೂಕನು 1 : 29 (KNV)
ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
ಲೂಕನು 1 : 30 (KNV)
ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
ಲೂಕನು 1 : 31 (KNV)
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
ಲೂಕನು 1 : 32 (KNV)
ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
ಲೂಕನು 1 : 33 (KNV)
ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
ಲೂಕನು 1 : 34 (KNV)
ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
ಲೂಕನು 1 : 35 (KNV)
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
ಲೂಕನು 1 : 36 (KNV)
ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
ಲೂಕನು 1 : 37 (KNV)
ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
ಲೂಕನು 1 : 38 (KNV)
ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
ಲೂಕನು 1 : 39 (KNV)
ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
ಲೂಕನು 1 : 40 (KNV)
ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
ಲೂಕನು 1 : 41 (KNV)
ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
ಲೂಕನು 1 : 42 (KNV)
ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
ಲೂಕನು 1 : 43 (KNV)
ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
ಲೂಕನು 1 : 44 (KNV)
ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
ಲೂಕನು 1 : 45 (KNV)
ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
ಲೂಕನು 1 : 46 (KNV)
ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
ಲೂಕನು 1 : 47 (KNV)
ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
ಲೂಕನು 1 : 48 (KNV)
ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
ಲೂಕನು 1 : 49 (KNV)
ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
ಲೂಕನು 1 : 50 (KNV)
ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
ಲೂಕನು 1 : 51 (KNV)
ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
ಲೂಕನು 1 : 52 (KNV)
ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
ಲೂಕನು 1 : 53 (KNV)
ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
ಲೂಕನು 1 : 54 (KNV)
ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
ಲೂಕನು 1 : 55 (KNV)
ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
ಲೂಕನು 1 : 56 (KNV)
ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು.
ಲೂಕನು 1 : 57 (KNV)
ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
ಲೂಕನು 1 : 58 (KNV)
ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
ಲೂಕನು 1 : 59 (KNV)
ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
ಲೂಕನು 1 : 60 (KNV)
ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
ಲೂಕನು 1 : 61 (KNV)
ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
ಲೂಕನು 1 : 62 (KNV)
ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು.
ಲೂಕನು 1 : 63 (KNV)
ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
ಲೂಕನು 1 : 64 (KNV)
ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು.
ಲೂಕನು 1 : 65 (KNV)
ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.
ಲೂಕನು 1 : 66 (KNV)
ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
ಲೂಕನು 1 : 67 (KNV)
ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ--
ಲೂಕನು 1 : 68 (KNV)
ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
ಲೂಕನು 1 : 69 (KNV)
ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
ಲೂಕನು 1 : 70 (KNV)
ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
ಲೂಕನು 1 : 71 (KNV)
ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
ಲೂಕನು 1 : 72 (KNV)
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ಲೂಕನು 1 : 73 (KNV)
ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
ಲೂಕನು 1 : 74 (KNV)
ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
ಲೂಕನು 1 : 75 (KNV)
ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
ಲೂಕನು 1 : 76 (KNV)
ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
ಲೂಕನು 1 : 77 (KNV)
ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
ಲೂಕನು 1 : 78 (KNV)
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
ಲೂಕನು 1 : 79 (KNV)
ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ಲೂಕನು 1 : 80 (KNV)
ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68 69 70 71 72 73 74 75 76 77 78 79 80

BG:

Opacity:

Color:


Size:


Font: