ಲೂಕನು 3 : 1 (KNV)
ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
ಲೂಕನು 3 : 2 (KNV)
ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
ಲೂಕನು 3 : 3 (KNV)
ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
ಲೂಕನು 3 : 4 (KNV)
ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
ಲೂಕನು 3 : 5 (KNV)
ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
ಲೂಕನು 3 : 6 (KNV)
ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
ಲೂಕನು 3 : 7 (KNV)
ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
ಲೂಕನು 3 : 8 (KNV)
ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಲೂಕನು 3 : 9 (KNV)
ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
ಲೂಕನು 3 : 10 (KNV)
ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.
ಲೂಕನು 3 : 11 (KNV)
ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
ಲೂಕನು 3 : 12 (KNV)
ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
ಲೂಕನು 3 : 13 (KNV)
ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.
ಲೂಕನು 3 : 14 (KNV)
ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
ಲೂಕನು 3 : 15 (KNV)
ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
ಲೂಕನು 3 : 16 (KNV)
ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
ಲೂಕನು 3 : 17 (KNV)
ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
ಲೂಕನು 3 : 18 (KNV)
ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.
ಲೂಕನು 3 : 19 (KNV)
ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
ಲೂಕನು 3 : 20 (KNV)
ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
ಲೂಕನು 3 : 21 (KNV)
ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
ಲೂಕನು 3 : 22 (KNV)
ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
ಲೂಕನು 3 : 23 (KNV)
ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
ಲೂಕನು 3 : 24 (KNV)
ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು;
ಲೂಕನು 3 : 25 (KNV)
ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು;
ಲೂಕನು 3 : 26 (KNV)
ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮೀಯ ಮಗನು; ಇವನು ಯೋಸೇಫನ ಮಗನು; ಇವನು ಯೂದನ ಮಗನು;
ಲೂಕನು 3 : 27 (KNV)
ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾ ಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು;
ಲೂಕನು 3 : 28 (KNV)
ಇವನು ಮೆಲ್ಖಿಯ ಮಗನು; ಇವನು ಅದ್ದಿಯ ಮಗನು; ಇವನು ಕೊಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು;
ಲೂಕನು 3 : 29 (KNV)
ಇವನು ಯೋಸೇಯನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು;
ಲೂಕನು 3 : 30 (KNV)
ಇವನು ಸಿಮಿ ಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು;
ಲೂಕನು 3 : 31 (KNV)
ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
ಲೂಕನು 3 : 32 (KNV)
ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
ಲೂಕನು 3 : 33 (KNV)
ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
ಲೂಕನು 3 : 34 (KNV)
ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
ಲೂಕನು 3 : 35 (KNV)
ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;
ಲೂಕನು 3 : 36 (KNV)
ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
ಲೂಕನು 3 : 37 (KNV)
ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;
ಲೂಕನು 3 : 38 (KNV)
ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
❮
❯