ಮಾರ್ಕನು 16 : 1 (KNV)
ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.
ಮಾರ್ಕನು 16 : 2 (KNV)
ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು,
ಮಾರ್ಕನು 16 : 3 (KNV)
ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
ಮಾರ್ಕನು 16 : 4 (KNV)
ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.
ಮಾರ್ಕನು 16 : 5 (KNV)
ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
ಮಾರ್ಕನು 16 : 6 (KNV)
ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
ಮಾರ್ಕನು 16 : 7 (KNV)
ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
ಮಾರ್ಕನು 16 : 8 (KNV)
ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
ಮಾರ್ಕನು 16 : 9 (KNV)
ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
ಮಾರ್ಕನು 16 : 10 (KNV)
ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.
ಮಾರ್ಕನು 16 : 11 (KNV)
ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.
ಮಾರ್ಕನು 16 : 12 (KNV)
ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
ಮಾರ್ಕನು 16 : 13 (KNV)
ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
ಮಾರ್ಕನು 16 : 14 (KNV)
ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
ಮಾರ್ಕನು 16 : 15 (KNV)
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಮಾರ್ಕನು 16 : 16 (KNV)
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ಮಾರ್ಕನು 16 : 17 (KNV)
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
ಮಾರ್ಕನು 16 : 18 (KNV)
ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
ಮಾರ್ಕನು 16 : 19 (KNV)
ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.
ಮಾರ್ಕನು 16 : 20 (KNV)
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: