ಮಾರ್ಕನು 5 : 1 (KNV)
ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು.
ಮಾರ್ಕನು 5 : 2 (KNV)
ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
ಮಾರ್ಕನು 5 : 3 (KNV)
ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.
ಮಾರ್ಕನು 5 : 4 (KNV)
ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.
ಮಾರ್ಕನು 5 : 5 (KNV)
ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.
ಮಾರ್ಕನು 5 : 6 (KNV)
ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ --
ಮಾರ್ಕನು 5 : 7 (KNV)
ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
ಮಾರ್ಕನು 5 : 8 (KNV)
ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
ಮಾರ್ಕನು 5 : 9 (KNV)
ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
ಮಾರ್ಕನು 5 : 10 (KNV)
ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು.
ಮಾರ್ಕನು 5 : 11 (KNV)
ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.
ಮಾರ್ಕನು 5 : 12 (KNV)
ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.
ಮಾರ್ಕನು 5 : 13 (KNV)
ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
ಮಾರ್ಕನು 5 : 14 (KNV)
ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು.
ಮಾರ್ಕನು 5 : 15 (KNV)
ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
ಮಾರ್ಕನು 5 : 16 (KNV)
ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.
ಮಾರ್ಕನು 5 : 17 (KNV)
ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.
ಮಾರ್ಕನು 5 : 18 (KNV)
ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
ಮಾರ್ಕನು 5 : 19 (KNV)
ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
ಮಾರ್ಕನು 5 : 20 (KNV)
ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
ಮಾರ್ಕನು 5 : 21 (KNV)
ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
ಮಾರ್ಕನು 5 : 22 (KNV)
ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
ಮಾರ್ಕನು 5 : 23 (KNV)
ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
ಮಾರ್ಕನು 5 : 24 (KNV)
ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.
ಮಾರ್ಕನು 5 : 25 (KNV)
ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
ಮಾರ್ಕನು 5 : 26 (KNV)
ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
ಮಾರ್ಕನು 5 : 27 (KNV)
ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.
ಮಾರ್ಕನು 5 : 28 (KNV)
ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು.
ಮಾರ್ಕನು 5 : 29 (KNV)
ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
ಮಾರ್ಕನು 5 : 30 (KNV)
ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು
ಮಾರ್ಕನು 5 : 31 (KNV)
ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.
ಮಾರ್ಕನು 5 : 32 (KNV)
ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು.
ಮಾರ್ಕನು 5 : 33 (KNV)
ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
ಮಾರ್ಕನು 5 : 34 (KNV)
ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
ಮಾರ್ಕನು 5 : 35 (KNV)
ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
ಮಾರ್ಕನು 5 : 36 (KNV)
ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
ಮಾರ್ಕನು 5 : 37 (KNV)
ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
ಮಾರ್ಕನು 5 : 38 (KNV)
ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
ಮಾರ್ಕನು 5 : 39 (KNV)
ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
ಮಾರ್ಕನು 5 : 40 (KNV)
ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
ಮಾರ್ಕನು 5 : 41 (KNV)
ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
ಮಾರ್ಕನು 5 : 42 (KNV)
ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.
ಮಾರ್ಕನು 5 : 43 (KNV)
ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43

BG:

Opacity:

Color:


Size:


Font: