ಮತ್ತಾಯನು 13 : 1 (KNV)
ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
ಮತ್ತಾಯನು 13 : 2 (KNV)
ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
ಮತ್ತಾಯನು 13 : 3 (KNV)
ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
ಮತ್ತಾಯನು 13 : 4 (KNV)
ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
ಮತ್ತಾಯನು 13 : 5 (KNV)
ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;
ಮತ್ತಾಯನು 13 : 6 (KNV)
ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
ಮತ್ತಾಯನು 13 : 7 (KNV)
ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
ಮತ್ತಾಯನು 13 : 8 (KNV)
ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.
ಮತ್ತಾಯನು 13 : 9 (KNV)
ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
ಮತ್ತಾಯನು 13 : 10 (KNV)
ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
ಮತ್ತಾಯನು 13 : 11 (KNV)
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಮತ್ತಾಯನು 13 : 12 (KNV)
ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
ಮತ್ತಾಯನು 13 : 13 (KNV)
ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
ಮತ್ತಾಯನು 13 : 14 (KNV)
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
ಮತ್ತಾಯನು 13 : 15 (KNV)
ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
ಮತ್ತಾಯನು 13 : 16 (KNV)
ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
ಮತ್ತಾಯನು 13 : 17 (KNV)
ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
ಮತ್ತಾಯನು 13 : 18 (KNV)
ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
ಮತ್ತಾಯನು 13 : 19 (KNV)
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ಮತ್ತಾಯನು 13 : 20 (KNV)
ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
ಮತ್ತಾಯನು 13 : 21 (KNV)
ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
ಮತ್ತಾಯನು 13 : 22 (KNV)
ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
ಮತ್ತಾಯನು 13 : 23 (KNV)
ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
ಮತ್ತಾಯನು 13 : 24 (KNV)
ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
ಮತ್ತಾಯನು 13 : 25 (KNV)
ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
ಮತ್ತಾಯನು 13 : 26 (KNV)
ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.
ಮತ್ತಾಯನು 13 : 27 (KNV)
ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
ಮತ್ತಾಯನು 13 : 28 (KNV)
ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
ಮತ್ತಾಯನು 13 : 29 (KNV)
ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
ಮತ್ತಾಯನು 13 : 30 (KNV)
ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
ಮತ್ತಾಯನು 13 : 31 (KNV)
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
ಮತ್ತಾಯನು 13 : 32 (KNV)
ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
ಮತ್ತಾಯನು 13 : 33 (KNV)
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
ಮತ್ತಾಯನು 13 : 34 (KNV)
ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
ಮತ್ತಾಯನು 13 : 35 (KNV)
ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
ಮತ್ತಾಯನು 13 : 36 (KNV)
ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
ಮತ್ತಾಯನು 13 : 37 (KNV)
ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
ಮತ್ತಾಯನು 13 : 38 (KNV)
ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
ಮತ್ತಾಯನು 13 : 39 (KNV)
ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
ಮತ್ತಾಯನು 13 : 40 (KNV)
ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.
ಮತ್ತಾಯನು 13 : 41 (KNV)
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
ಮತ್ತಾಯನು 13 : 42 (KNV)
ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ಮತ್ತಾಯನು 13 : 43 (KNV)
ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
ಮತ್ತಾಯನು 13 : 44 (KNV)
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ಮತ್ತಾಯನು 13 : 45 (KNV)
ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
ಮತ್ತಾಯನು 13 : 46 (KNV)
ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
ಮತ್ತಾಯನು 13 : 47 (KNV)
ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
ಮತ್ತಾಯನು 13 : 48 (KNV)
ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
ಮತ್ತಾಯನು 13 : 49 (KNV)
ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
ಮತ್ತಾಯನು 13 : 50 (KNV)
ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
ಮತ್ತಾಯನು 13 : 51 (KNV)
ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
ಮತ್ತಾಯನು 13 : 52 (KNV)
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ಮತ್ತಾಯನು 13 : 53 (KNV)
ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
ಮತ್ತಾಯನು 13 : 54 (KNV)
ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
ಮತ್ತಾಯನು 13 : 55 (KNV)
ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
ಮತ್ತಾಯನು 13 : 56 (KNV)
ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
ಮತ್ತಾಯನು 13 : 57 (KNV)
ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
ಮತ್ತಾಯನು 13 : 58 (KNV)
ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58

BG:

Opacity:

Color:


Size:


Font: