ಮತ್ತಾಯನು 19 : 1 (KNV)
ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು.
ಮತ್ತಾಯನು 19 : 2 (KNV)
ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.
ಮತ್ತಾಯನು 19 : 3 (KNV)
ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
ಮತ್ತಾಯನು 19 : 4 (KNV)
ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
ಮತ್ತಾಯನು 19 : 5 (KNV)
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?
ಮತ್ತಾಯನು 19 : 6 (KNV)
ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
ಮತ್ತಾಯನು 19 : 7 (KNV)
ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
ಮತ್ತಾಯನು 19 : 8 (KNV)
ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
ಮತ್ತಾಯನು 19 : 9 (KNV)
ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
ಮತ್ತಾಯನು 19 : 10 (KNV)
ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ.
ಮತ್ತಾಯನು 19 : 11 (KNV)
ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.
ಮತ್ತಾಯನು 19 : 12 (KNV)
ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
ಮತ್ತಾಯನು 19 : 13 (KNV)
ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
ಮತ್ತಾಯನು 19 : 14 (KNV)
ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.
ಮತ್ತಾಯನು 19 : 15 (KNV)
ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.
ಮತ್ತಾಯನು 19 : 16 (KNV)
ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.
ಮತ್ತಾಯನು 19 : 17 (KNV)
ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
ಮತ್ತಾಯನು 19 : 18 (KNV)
ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
ಮತ್ತಾಯನು 19 : 19 (KNV)
ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
ಮತ್ತಾಯನು 19 : 20 (KNV)
ಆಗ ಆ ಯೌವನಸ್ಥನು ಆತನಿಗೆ--ಇವೆಲ್ಲವುಗಳನ್ನು ನಾನು ಬಾಲ್ಯದಿಂದಲೇ ಕೈಕೊಂಡಿದ್ದೇನೆ; ಇನ್ನು ನನಗೇನು ಕಡಿಮೆಯಾಗಿದೆ ಎಂದು ಕೇಳಿದನು.
ಮತ್ತಾಯನು 19 : 21 (KNV)
ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
ಮತ್ತಾಯನು 19 : 22 (KNV)
ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.
ಮತ್ತಾಯನು 19 : 23 (KNV)
ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಮತ್ತಾಯನು 19 : 24 (KNV)
ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
ಮತ್ತಾಯನು 19 : 25 (KNV)
ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
ಮತ್ತಾಯನು 19 : 26 (KNV)
ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
ಮತ್ತಾಯನು 19 : 27 (KNV)
ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
ಮತ್ತಾಯನು 19 : 28 (KNV)
ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
ಮತ್ತಾಯನು 19 : 29 (KNV)
ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನು
ಮತ್ತಾಯನು 19 : 30 (KNV)
ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
❮
❯