ಮತ್ತಾಯನು 21 : 1 (KNV)
ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
ಮತ್ತಾಯನು 21 : 2 (KNV)
ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
ಮತ್ತಾಯನು 21 : 3 (KNV)
ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
ಮತ್ತಾಯನು 21 : 4 (KNV)
ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--
ಮತ್ತಾಯನು 21 : 5 (KNV)
ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್‌ ಕುಮಾರ್ತೆಗೆ ಹೇಳಿರಿ ಎಂಬದೇ.
ಮತ್ತಾಯನು 21 : 6 (KNV)
ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
ಮತ್ತಾಯನು 21 : 7 (KNV)
ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
ಮತ್ತಾಯನು 21 : 8 (KNV)
ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
ಮತ್ತಾಯನು 21 : 9 (KNV)
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
ಮತ್ತಾಯನು 21 : 10 (KNV)
ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
ಮತ್ತಾಯನು 21 : 11 (KNV)
ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
ಮತ್ತಾಯನು 21 : 12 (KNV)
ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
ಮತ್ತಾಯನು 21 : 13 (KNV)
ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
ಮತ್ತಾಯನು 21 : 14 (KNV)
ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
ಮತ್ತಾಯನು 21 : 15 (KNV)
ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
ಮತ್ತಾಯನು 21 : 16 (KNV)
ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
ಮತ್ತಾಯನು 21 : 17 (KNV)
ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
ಮತ್ತಾಯನು 21 : 18 (KNV)
ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.
ಮತ್ತಾಯನು 21 : 19 (KNV)
ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
ಮತ್ತಾಯನು 21 : 20 (KNV)
ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.
ಮತ್ತಾಯನು 21 : 21 (KNV)
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
ಮತ್ತಾಯನು 21 : 22 (KNV)
ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
ಮತ್ತಾಯನು 21 : 23 (KNV)
ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
ಮತ್ತಾಯನು 21 : 24 (KNV)
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
ಮತ್ತಾಯನು 21 : 25 (KNV)
ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
ಮತ್ತಾಯನು 21 : 26 (KNV)
ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
ಮತ್ತಾಯನು 21 : 27 (KNV)
ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
ಮತ್ತಾಯನು 21 : 28 (KNV)
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
ಮತ್ತಾಯನು 21 : 29 (KNV)
ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
ಮತ್ತಾಯನು 21 : 30 (KNV)
ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
ಮತ್ತಾಯನು 21 : 31 (KNV)
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಮತ್ತಾಯನು 21 : 32 (KNV)
ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
ಮತ್ತಾಯನು 21 : 33 (KNV)
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
ಮತ್ತಾಯನು 21 : 34 (KNV)
ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
ಮತ್ತಾಯನು 21 : 35 (KNV)
ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
ಮತ್ತಾಯನು 21 : 36 (KNV)
ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
ಮತ್ತಾಯನು 21 : 37 (KNV)
ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
ಮತ್ತಾಯನು 21 : 38 (KNV)
ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
ಮತ್ತಾಯನು 21 : 39 (KNV)
ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
ಮತ್ತಾಯನು 21 : 40 (KNV)
ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
ಮತ್ತಾಯನು 21 : 41 (KNV)
ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
ಮತ್ತಾಯನು 21 : 42 (KNV)
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
ಮತ್ತಾಯನು 21 : 43 (KNV)
ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
ಮತ್ತಾಯನು 21 : 44 (KNV)
ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
ಮತ್ತಾಯನು 21 : 45 (KNV)
ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
ಮತ್ತಾಯನು 21 : 46 (KNV)
ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46

BG:

Opacity:

Color:


Size:


Font: