ಅರಣ್ಯಕಾಂಡ 10 : 1 (KNV)
ಕರ್ತನು ಮೋಶೆಗೆ ಹೇಳಿದ್ದೇನೆಂದರೆ
ಅರಣ್ಯಕಾಂಡ 10 : 2 (KNV)
ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.
ಅರಣ್ಯಕಾಂಡ 10 : 3 (KNV)
ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು.
ಅರಣ್ಯಕಾಂಡ 10 : 4 (KNV)
ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು.
ಅರಣ್ಯಕಾಂಡ 10 : 5 (KNV)
ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು.
ಅರಣ್ಯಕಾಂಡ 10 : 6 (KNV)
ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
ಅರಣ್ಯಕಾಂಡ 10 : 7 (KNV)
ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ.
ಅರಣ್ಯಕಾಂಡ 10 : 8 (KNV)
ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.
ಅರಣ್ಯಕಾಂಡ 10 : 9 (KNV)
ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
ಅರಣ್ಯಕಾಂಡ 10 : 10 (KNV)
ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
ಅರಣ್ಯಕಾಂಡ 10 : 11 (KNV)
ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.
ಅರಣ್ಯಕಾಂಡ 10 : 12 (KNV)
ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
ಅರಣ್ಯಕಾಂಡ 10 : 13 (KNV)
ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.
ಅರಣ್ಯಕಾಂಡ 10 : 14 (KNV)
ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.
ಅರಣ್ಯಕಾಂಡ 10 : 15 (KNV)
ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು.
ಅರಣ್ಯಕಾಂಡ 10 : 16 (KNV)
ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು.
ಅರಣ್ಯಕಾಂಡ 10 : 17 (KNV)
ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.
ಅರಣ್ಯಕಾಂಡ 10 : 18 (KNV)
ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.
ಅರಣ್ಯಕಾಂಡ 10 : 19 (KNV)
ಸಿಮೆಯೋನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಇದ್ದನು.
ಅರಣ್ಯಕಾಂಡ 10 : 20 (KNV)
ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು.
ಅರಣ್ಯಕಾಂಡ 10 : 21 (KNV)
ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
ಅರಣ್ಯಕಾಂಡ 10 : 22 (KNV)
ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
ಅರಣ್ಯಕಾಂಡ 10 : 23 (KNV)
ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು.
ಅರಣ್ಯಕಾಂಡ 10 : 24 (KNV)
ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು.
ಅರಣ್ಯಕಾಂಡ 10 : 25 (KNV)
ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
ಅರಣ್ಯಕಾಂಡ 10 : 26 (KNV)
ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು.
ಅರಣ್ಯಕಾಂಡ 10 : 27 (KNV)
ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.
ಅರಣ್ಯಕಾಂಡ 10 : 28 (KNV)
ಈ ಪ್ರಕಾರ ಇಸ್ರಾಯೇಲ್ ಮಕ್ಕಳು ತಮ್ಮ ಸೈನ್ಯಗಳ ಪ್ರಕಾರ ಪ್ರಯಾಣವಾಗಿ ಹೊರಡುತ್ತಿದ್ದರು.
ಅರಣ್ಯಕಾಂಡ 10 : 29 (KNV)
ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
ಅರಣ್ಯಕಾಂಡ 10 : 30 (KNV)
ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.
ಅರಣ್ಯಕಾಂಡ 10 : 31 (KNV)
ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.
ಅರಣ್ಯಕಾಂಡ 10 : 32 (KNV)
ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.
ಅರಣ್ಯಕಾಂಡ 10 : 33 (KNV)
ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
ಅರಣ್ಯಕಾಂಡ 10 : 34 (KNV)
ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.
ಅರಣ್ಯಕಾಂಡ 10 : 35 (KNV)
ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.
ಅರಣ್ಯಕಾಂಡ 10 : 36 (KNV)
ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36