ಅರಣ್ಯಕಾಂಡ 19 : 1 (KNV)
ಕರ್ತನು ಮೋಶೆಯ ಸಂಗಡಲೂ ಆರೋನನ ಸಂಗಡಲೂ ಮಾತನಾಡುತ್ತಾ
ಅರಣ್ಯಕಾಂಡ 19 : 2 (KNV)
ಕರ್ತನು ಆಜ್ಞಾಪಿಸಿದ ನ್ಯಾಯಪ್ರಮಾಣದ ಕಟ್ಟಳೆ ಏನಂದರೆ--ಇಸ್ರಾಯೇಲ್‌ ಮಕ್ಕಳು ನಿನಗೆ ಮಚ್ಚೆ ಇಲ್ಲದಂಥ ನೊಗವನ್ನು ಎಂದೂ ಹೊರದಂಥ ಪೂರ್ಣಾಂಗವಾದ ಕೆಂದಹಸುವನ್ನು ತಂದುಕೊಡುವ ಹಾಗೆ ನೀನು ಅವರ ಸಂಗಡ ಮಾತನಾಡು.
ಅರಣ್ಯಕಾಂಡ 19 : 3 (KNV)
ನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು.
ಅರಣ್ಯಕಾಂಡ 19 : 4 (KNV)
ಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.
ಅರಣ್ಯಕಾಂಡ 19 : 5 (KNV)
ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
ಅರಣ್ಯಕಾಂಡ 19 : 6 (KNV)
ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
ಅರಣ್ಯಕಾಂಡ 19 : 7 (KNV)
ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
ಅರಣ್ಯಕಾಂಡ 19 : 8 (KNV)
ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
ಅರಣ್ಯಕಾಂಡ 19 : 9 (KNV)
ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್‌ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
ಅರಣ್ಯಕಾಂಡ 19 : 10 (KNV)
ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್‌ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.
ಅರಣ್ಯಕಾಂಡ 19 : 11 (KNV)
ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
ಅರಣ್ಯಕಾಂಡ 19 : 12 (KNV)
ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.
ಅರಣ್ಯಕಾಂಡ 19 : 13 (KNV)
ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
ಅರಣ್ಯಕಾಂಡ 19 : 14 (KNV)
ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
ಅರಣ್ಯಕಾಂಡ 19 : 15 (KNV)
ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು.
ಅರಣ್ಯಕಾಂಡ 19 : 16 (KNV)
ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
ಅರಣ್ಯಕಾಂಡ 19 : 17 (KNV)
ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
ಅರಣ್ಯಕಾಂಡ 19 : 18 (KNV)
ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
ಅರಣ್ಯಕಾಂಡ 19 : 19 (KNV)
ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
ಅರಣ್ಯಕಾಂಡ 19 : 20 (KNV)
ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
ಅರಣ್ಯಕಾಂಡ 19 : 21 (KNV)
ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
ಅರಣ್ಯಕಾಂಡ 19 : 22 (KNV)
ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: