ಅರಣ್ಯಕಾಂಡ 22 : 1 (KNV)
ಇಸ್ರಾಯೇಲ್ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.
ಅರಣ್ಯಕಾಂಡ 22 : 2 (KNV)
ಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು.
ಅರಣ್ಯಕಾಂಡ 22 : 3 (KNV)
ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು.
ಅರಣ್ಯಕಾಂಡ 22 : 4 (KNV)
ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
ಅರಣ್ಯಕಾಂಡ 22 : 5 (KNV)
ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
ಅರಣ್ಯಕಾಂಡ 22 : 6 (KNV)
ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
ಅರಣ್ಯಕಾಂಡ 22 : 7 (KNV)
ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
ಅರಣ್ಯಕಾಂಡ 22 : 8 (KNV)
ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.
ಅರಣ್ಯಕಾಂಡ 22 : 9 (KNV)
ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು.
ಅರಣ್ಯಕಾಂಡ 22 : 10 (KNV)
ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ--
ಅರಣ್ಯಕಾಂಡ 22 : 11 (KNV)
ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.
ಅರಣ್ಯಕಾಂಡ 22 : 12 (KNV)
ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.
ಅರಣ್ಯಕಾಂಡ 22 : 13 (KNV)
ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,
ಅರಣ್ಯಕಾಂಡ 22 : 14 (KNV)
ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.
ಅರಣ್ಯಕಾಂಡ 22 : 15 (KNV)
ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು.
ಅರಣ್ಯಕಾಂಡ 22 : 16 (KNV)
ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.
ಅರಣ್ಯಕಾಂಡ 22 : 17 (KNV)
ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
ಅರಣ್ಯಕಾಂಡ 22 : 18 (KNV)
ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
ಅರಣ್ಯಕಾಂಡ 22 : 19 (KNV)
ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು.
ಅರಣ್ಯಕಾಂಡ 22 : 20 (KNV)
ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
ಅರಣ್ಯಕಾಂಡ 22 : 21 (KNV)
ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು.
ಅರಣ್ಯಕಾಂಡ 22 : 22 (KNV)
ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
ಅರಣ್ಯಕಾಂಡ 22 : 23 (KNV)
ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
ಅರಣ್ಯಕಾಂಡ 22 : 24 (KNV)
ಆದರೆ ಕರ್ತನ ದೂತನು ದ್ರಾಕ್ಷೇತೋಟಗಳ ಹಾದಿಯಲ್ಲಿ ಈಚೆ ಆಚೆ ಗೋಡೆ ಇದ್ದಲ್ಲಿ ನಿಂತನು.
ಅರಣ್ಯಕಾಂಡ 22 : 25 (KNV)
ಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು.
ಅರಣ್ಯಕಾಂಡ 22 : 26 (KNV)
ಆಗ ಕರ್ತನ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.
ಅರಣ್ಯಕಾಂಡ 22 : 27 (KNV)
ಕತ್ತೆಯು ಕರ್ತನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು; ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.
ಅರಣ್ಯಕಾಂಡ 22 : 28 (KNV)
ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು.
ಅರಣ್ಯಕಾಂಡ 22 : 29 (KNV)
ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು.
ಅರಣ್ಯಕಾಂಡ 22 : 30 (KNV)
ಕತ್ತೆಯು ಬಿಳಾಮನಿಗೆ ಹೇಳಿದ್ದು--ನಾನು ನಿನ್ನದಾ ದಂದಿನಿಂದ ಈ ದಿವಸದ ವರೆಗೂ ನೀನು ಹತ್ತಿಕೊಂಡ ನಿನ್ನ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ಪ್ರಕಾರ ಮಾಡಿದೆನೋ ಅಂದಿತು. ಅದಕ್ಕ ವನು--ಇಲ್ಲ ಅಂದನು.
ಅರಣ್ಯಕಾಂಡ 22 : 31 (KNV)
ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
ಅರಣ್ಯಕಾಂಡ 22 : 32 (KNV)
ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.
ಅರಣ್ಯಕಾಂಡ 22 : 33 (KNV)
ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು.
ಅರಣ್ಯಕಾಂಡ 22 : 34 (KNV)
ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.
ಅರಣ್ಯಕಾಂಡ 22 : 35 (KNV)
ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
ಅರಣ್ಯಕಾಂಡ 22 : 36 (KNV)
ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು.
ಅರಣ್ಯಕಾಂಡ 22 : 37 (KNV)
ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ?
ಅರಣ್ಯಕಾಂಡ 22 : 38 (KNV)
ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
ಅರಣ್ಯಕಾಂಡ 22 : 39 (KNV)
ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್ಹುಚೋತಿಗೆ ಬಂದರು.
ಅರಣ್ಯಕಾಂಡ 22 : 40 (KNV)
ಬಾಲಾ ಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಬಿಳಾಮನನ್ನೂ ಅವನ ಸಂಗಡ ಇದ್ದ ಪ್ರಭುಗಳನ್ನೂ ಕಳುಹಿಸಿದನು.
ಅರಣ್ಯಕಾಂಡ 22 : 41 (KNV)
ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41

BG:

Opacity:

Color:


Size:


Font: