ಅರಣ್ಯಕಾಂಡ 24 : 1 (KNV)
ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.
ಅರಣ್ಯಕಾಂಡ 24 : 2 (KNV)
ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
ಅರಣ್ಯಕಾಂಡ 24 : 3 (KNV)
ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು.
ಅರಣ್ಯಕಾಂಡ 24 : 4 (KNV)
ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--
ಅರಣ್ಯಕಾಂಡ 24 : 5 (KNV)
ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
ಅರಣ್ಯಕಾಂಡ 24 : 6 (KNV)
ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
ಅರಣ್ಯಕಾಂಡ 24 : 7 (KNV)
ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
ಅರಣ್ಯಕಾಂಡ 24 : 8 (KNV)
ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
ಅರಣ್ಯಕಾಂಡ 24 : 9 (KNV)
ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
ಅರಣ್ಯಕಾಂಡ 24 : 10 (KNV)
ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
ಅರಣ್ಯಕಾಂಡ 24 : 11 (KNV)
ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.
ಅರಣ್ಯಕಾಂಡ 24 : 12 (KNV)
ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ--
ಅರಣ್ಯಕಾಂಡ 24 : 13 (KNV)
ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;
ಅರಣ್ಯಕಾಂಡ 24 : 14 (KNV)
ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
ಅರಣ್ಯಕಾಂಡ 24 : 15 (KNV)
ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.
ಅರಣ್ಯಕಾಂಡ 24 : 16 (KNV)
ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--
ಅರಣ್ಯಕಾಂಡ 24 : 17 (KNV)
ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್‌ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
ಅರಣ್ಯಕಾಂಡ 24 : 18 (KNV)
ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
ಅರಣ್ಯಕಾಂಡ 24 : 19 (KNV)
ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
ಅರಣ್ಯಕಾಂಡ 24 : 20 (KNV)
ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
ಅರಣ್ಯಕಾಂಡ 24 : 21 (KNV)
ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
ಅರಣ್ಯಕಾಂಡ 24 : 22 (KNV)
ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು.
ಅರಣ್ಯಕಾಂಡ 24 : 23 (KNV)
ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?
ಅರಣ್ಯಕಾಂಡ 24 : 24 (KNV)
ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
ಅರಣ್ಯಕಾಂಡ 24 : 25 (KNV)
ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: