ಅರಣ್ಯಕಾಂಡ 25 : 1 (KNV)
ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
ಅರಣ್ಯಕಾಂಡ 25 : 2 (KNV)
ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
ಅರಣ್ಯಕಾಂಡ 25 : 3 (KNV)
ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
ಅರಣ್ಯಕಾಂಡ 25 : 4 (KNV)
ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
ಅರಣ್ಯಕಾಂಡ 25 : 5 (KNV)
ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
ಅರಣ್ಯಕಾಂಡ 25 : 6 (KNV)
ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು.
ಅರಣ್ಯಕಾಂಡ 25 : 7 (KNV)
ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು
ಅರಣ್ಯಕಾಂಡ 25 : 8 (KNV)
ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
ಅರಣ್ಯಕಾಂಡ 25 : 9 (KNV)
ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
ಅರಣ್ಯಕಾಂಡ 25 : 10 (KNV)
ಆಗ ಕರ್ತನು ಮೋಶೆಗೆ--
ಅರಣ್ಯಕಾಂಡ 25 : 11 (KNV)
ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
ಅರಣ್ಯಕಾಂಡ 25 : 12 (KNV)
ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.
ಅರಣ್ಯಕಾಂಡ 25 : 13 (KNV)
ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
ಅರಣ್ಯಕಾಂಡ 25 : 14 (KNV)
ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
ಅರಣ್ಯಕಾಂಡ 25 : 15 (KNV)
ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
ಅರಣ್ಯಕಾಂಡ 25 : 16 (KNV)
ಕರ್ತನು ಮೋಶೆಗೆ--
ಅರಣ್ಯಕಾಂಡ 25 : 17 (KNV)
ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.
ಅರಣ್ಯಕಾಂಡ 25 : 18 (KNV)
ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18