ಅರಣ್ಯಕಾಂಡ 27 : 1 (KNV)
ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ
ಅರಣ್ಯಕಾಂಡ 27 : 2 (KNV)
ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
ಅರಣ್ಯಕಾಂಡ 27 : 3 (KNV)
ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
ಅರಣ್ಯಕಾಂಡ 27 : 4 (KNV)
ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು.
ಅರಣ್ಯಕಾಂಡ 27 : 5 (KNV)
ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.
ಅರಣ್ಯಕಾಂಡ 27 : 6 (KNV)
ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
ಅರಣ್ಯಕಾಂಡ 27 : 7 (KNV)
ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.
ಅರಣ್ಯಕಾಂಡ 27 : 8 (KNV)
ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿ ನೀನು ಹೇಳಬೇಕಾದದ್ದೇನಂದರೆ--ಒಬ್ಬನು ಮಗನಿಲ್ಲದೆ ಸತ್ತರೆ ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ಸೇರಿಸಬೇಕು.
ಅರಣ್ಯಕಾಂಡ 27 : 9 (KNV)
ಆದರೆ ಅವನಿಗೆ ಮಗಳು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ಸಹೋದರರಿಗೆ ಕೊಡಬೇಕು. ಅವನಿಗೆ ಸಹೋದರರು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.
ಅರಣ್ಯಕಾಂಡ 27 : 10 (KNV)
ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ ಅವನ ಕುಟುಂಬ ಗಳಲ್ಲಿ ಅವನಿಗೆ ಸವಿಾಪವಾದ ಬಂಧುವಿಗೆ ಅವನ ಸ್ವಾಸ್ತ್ಯವನ್ನು ಕೊಡಬೇಕು; ಅವನೇ ಅದನ್ನು ಸ್ವತಂತ್ರಿಸಿಕೊಳ್ಳಲಿ.
ಅರಣ್ಯಕಾಂಡ 27 : 11 (KNV)
ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇದು ಇಸ್ರಾಯೇಲ್ ಮಕ್ಕಳಿಗೆ ನ್ಯಾಯದ ಕಟ್ಟಳೆಯಾಗಿರಬೇಕು ಎಂದು ಹೇಳಿದನು.
ಅರಣ್ಯಕಾಂಡ 27 : 12 (KNV)
ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.
ಅರಣ್ಯಕಾಂಡ 27 : 13 (KNV)
ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ.
ಅರಣ್ಯಕಾಂಡ 27 : 14 (KNV)
ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
ಅರಣ್ಯಕಾಂಡ 27 : 15 (KNV)
ಮೋಶೆಯು ಕರ್ತನ ಸಂಗಡ ಮಾತನಾಡಿಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಕರ್ತನು ಈ ಸಭೆಯ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
ಅರಣ್ಯಕಾಂಡ 27 : 16 (KNV)
ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
ಅರಣ್ಯಕಾಂಡ 27 : 17 (KNV)
ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
ಅರಣ್ಯಕಾಂಡ 27 : 18 (KNV)
ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
ಅರಣ್ಯಕಾಂಡ 27 : 19 (KNV)
ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.
ಅರಣ್ಯಕಾಂಡ 27 : 20 (KNV)
ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು.
ಅರಣ್ಯಕಾಂಡ 27 : 21 (KNV)
ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
ಅರಣ್ಯಕಾಂಡ 27 : 22 (KNV)
ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ
ಅರಣ್ಯಕಾಂಡ 27 : 23 (KNV)
ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
❮
❯