ಅರಣ್ಯಕಾಂಡ 36 : 1 (KNV)
ಆಗ ಯೋಸೇಫನ ಕುಮಾರರ ಕುಟುಂಬ ದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬ ಗಳ ಮುಖ್ಯ ಯಜಮಾನರು ಸವಿಾಪಕ್ಕೆ ಬಂದು ಮೋಶೆಯ ಮುಂದೆಯೂ
ಅರಣ್ಯಕಾಂಡ 36 : 2 (KNV)
ಇಸ್ರಾಯೇಲ್ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು.
ಅರಣ್ಯಕಾಂಡ 36 : 3 (KNV)
ಆದರೆ ಅವರು ಇಸ್ರಾಯೇಲ್ ಮಕ್ಕಳ ಗೋತ್ರಗಳ ಮಕ್ಕಳಲ್ಲಿ ಒಬ್ಬರಿಗೆ ಮದುವೆ ಯಾದರೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಸ್ವಾಸ್ತ್ಯ ದಿಂದ ಕಡಿಮೆಯಾಗಿ ಅವರನ್ನು ಮದುವೆಮಾಡಿಕೊಂಡ ಗೋತ್ರದವರ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು; ಮತ್ತು ನಮ್ಮ ಸ್ವಾಸ್ತ್ಯದ ಭಾಗದಿಂದ ಅದು ಕಡಿಮೆಯಾಗಿ ಹೋಗುವದು.
ಅರಣ್ಯಕಾಂಡ 36 : 4 (KNV)
ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.
ಅರಣ್ಯಕಾಂಡ 36 : 5 (KNV)
ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.
ಅರಣ್ಯಕಾಂಡ 36 : 6 (KNV)
ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.
ಅರಣ್ಯಕಾಂಡ 36 : 7 (KNV)
ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು.
ಅರಣ್ಯಕಾಂಡ 36 : 8 (KNV)
ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು.
ಅರಣ್ಯಕಾಂಡ 36 : 9 (KNV)
ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು.
ಅರಣ್ಯಕಾಂಡ 36 : 10 (KNV)
ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು.
ಅರಣ್ಯಕಾಂಡ 36 : 11 (KNV)
ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು;
ಅರಣ್ಯಕಾಂಡ 36 : 12 (KNV)
ಯೋಸೇಫನ ಮಗನಾದ ಮನಸ್ಸೆಯ ಕುಮಾರರ ಕುಟುಂಬಗಳವರಿಗೆ ಮದುವೆಯಾದರು. ಈ ಪ್ರಕಾರ ಅವರ ಸ್ವಾಸ್ತ್ಯವು ತಮ್ಮ ಪಿತೃವಿನ ಗೋತ್ರದಲ್ಲಿಯೆ ಉಳಿಯುವ ಹಾಗಾಯಿತು.
ಅರಣ್ಯಕಾಂಡ 36 : 13 (KNV)
ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
❮
❯
1
2
3
4
5
6
7
8
9
10
11
12
13