ಅರಣ್ಯಕಾಂಡ 7 : 1 (KNV)
ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
ಅರಣ್ಯಕಾಂಡ 7 : 2 (KNV)
ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.
ಅರಣ್ಯಕಾಂಡ 7 : 3 (KNV)
ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.
ಅರಣ್ಯಕಾಂಡ 7 : 4 (KNV)
ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ
ಅರಣ್ಯಕಾಂಡ 7 : 5 (KNV)
ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು.
ಅರಣ್ಯಕಾಂಡ 7 : 6 (KNV)
ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು.
ಅರಣ್ಯಕಾಂಡ 7 : 7 (KNV)
ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.
ಅರಣ್ಯಕಾಂಡ 7 : 8 (KNV)
ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.
ಅರಣ್ಯಕಾಂಡ 7 : 9 (KNV)
ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
ಅರಣ್ಯಕಾಂಡ 7 : 10 (KNV)
ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.
ಅರಣ್ಯಕಾಂಡ 7 : 11 (KNV)
ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.
ಅರಣ್ಯಕಾಂಡ 7 : 12 (KNV)
ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
ಅರಣ್ಯಕಾಂಡ 7 : 13 (KNV)
ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ಅರಣ್ಯಕಾಂಡ 7 : 14 (KNV)
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
ಅರಣ್ಯಕಾಂಡ 7 : 15 (KNV)
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅರಣ್ಯಕಾಂಡ 7 : 16 (KNV)
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
ಅರಣ್ಯಕಾಂಡ 7 : 17 (KNV)
ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು.
ಅರಣ್ಯಕಾಂಡ 7 : 18 (KNV)
ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು.
ಅರಣ್ಯಕಾಂಡ 7 : 19 (KNV)
ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ಅರಣ್ಯಕಾಂಡ 7 : 20 (KNV)
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
ಅರಣ್ಯಕಾಂಡ 7 : 21 (KNV)
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅರಣ್ಯಕಾಂಡ 7 : 22 (KNV)
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ
ಅರಣ್ಯಕಾಂಡ 7 : 23 (KNV)
ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.
ಅರಣ್ಯಕಾಂಡ 7 : 24 (KNV)
ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--
ಅರಣ್ಯಕಾಂಡ 7 : 25 (KNV)
ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ಅರಣ್ಯಕಾಂಡ 7 : 26 (KNV)
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
ಅರಣ್ಯಕಾಂಡ 7 : 27 (KNV)
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅರಣ್ಯಕಾಂಡ 7 : 28 (KNV)
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
ಅರಣ್ಯಕಾಂಡ 7 : 29 (KNV)
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು.
ಅರಣ್ಯಕಾಂಡ 7 : 30 (KNV)
ನಾಲ್ಕನೇ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾ ನನಾಗಿರುವ ಶೆದೇಯೂರನ ಮಗನಾದ ಎಲೀಚೂ ರನು ಅರ್ಪಿಸಿದನು.
ಅರಣ್ಯಕಾಂಡ 7 : 31 (KNV)
ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ಅರಣ್ಯಕಾಂಡ 7 : 32 (KNV)
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.
ಅರಣ್ಯಕಾಂಡ 7 : 33 (KNV)
ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅರಣ್ಯಕಾಂಡ 7 : 34 (KNV)
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
ಅರಣ್ಯಕಾಂಡ 7 : 35 (KNV)
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು.
ಅರಣ್ಯಕಾಂಡ 7 : 36 (KNV)
ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು.
ಅರಣ್ಯಕಾಂಡ 7 : 37 (KNV)
ಅವನ ಅರ್ಪ ಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ಅರಣ್ಯಕಾಂಡ 7 : 38 (KNV)
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
ಅರಣ್ಯಕಾಂಡ 7 : 39 (KNV)
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅರಣ್ಯಕಾಂಡ 7 : 40 (KNV)
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
ಅರಣ್ಯಕಾಂಡ 7 : 41 (KNV)
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು.
ಅರಣ್ಯಕಾಂಡ 7 : 42 (KNV)
ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು.
ಅರಣ್ಯಕಾಂಡ 7 : 43 (KNV)
ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ಅರಣ್ಯಕಾಂಡ 7 : 44 (KNV)
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
ಅರಣ್ಯಕಾಂಡ 7 : 45 (KNV)
ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅರಣ್ಯಕಾಂಡ 7 : 46 (KNV)
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
ಅರಣ್ಯಕಾಂಡ 7 : 47 (KNV)
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು.
ಅರಣ್ಯಕಾಂಡ 7 : 48 (KNV)
ಏಳನೇ ದಿನದಲ್ಲಿ ಎಫ್ರಾಯಾಮ್ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು.
ಅರಣ್ಯಕಾಂಡ 7 : 49 (KNV)
ಅವನ ಅರ್ಪಣೆ ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ಅರಣ್ಯಕಾಂಡ 7 : 50 (KNV)
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.
ಅರಣ್ಯಕಾಂಡ 7 : 51 (KNV)
ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅರಣ್ಯಕಾಂಡ 7 : 52 (KNV)
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
ಅರಣ್ಯಕಾಂಡ 7 : 53 (KNV)
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಹೂದನ ಮಗನಾದ ಎಲೀಷಾಮನ ಅರ್ಪಣೆಯು.
ಅರಣ್ಯಕಾಂಡ 7 : 54 (KNV)
ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್ ಅರ್ಪಿಸಿದನು.
ಅರಣ್ಯಕಾಂಡ 7 : 55 (KNV)
ಅವನ ಅರ್ಪಣೆಯು ಏನಂದರೆ,--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ಅರಣ್ಯಕಾಂಡ 7 : 56 (KNV)
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
ಅರಣ್ಯಕಾಂಡ 7 : 57 (KNV)
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅರಣ್ಯಕಾಂಡ 7 : 58 (KNV)
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
ಅರಣ್ಯಕಾಂಡ 7 : 59 (KNV)
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು.
ಅರಣ್ಯಕಾಂಡ 7 : 60 (KNV)
ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು.
ಅರಣ್ಯಕಾಂಡ 7 : 61 (KNV)
ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
ಅರಣ್ಯಕಾಂಡ 7 : 62 (KNV)
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
ಅರಣ್ಯಕಾಂಡ 7 : 63 (KNV)
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅರಣ್ಯಕಾಂಡ 7 : 64 (KNV)
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
ಅರಣ್ಯಕಾಂಡ 7 : 65 (KNV)
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು.
ಅರಣ್ಯಕಾಂಡ 7 : 66 (KNV)
ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು.
ಅರಣ್ಯಕಾಂಡ 7 : 67 (KNV)
ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
ಅರಣ್ಯಕಾಂಡ 7 : 68 (KNV)
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
ಅರಣ್ಯಕಾಂಡ 7 : 69 (KNV)
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅರಣ್ಯಕಾಂಡ 7 : 70 (KNV)
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
ಅರಣ್ಯಕಾಂಡ 7 : 71 (KNV)
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.
ಅರಣ್ಯಕಾಂಡ 7 : 72 (KNV)
ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.
ಅರಣ್ಯಕಾಂಡ 7 : 73 (KNV)
ಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
ಅರಣ್ಯಕಾಂಡ 7 : 74 (KNV)
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
ಅರಣ್ಯಕಾಂಡ 7 : 75 (KNV)
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅರಣ್ಯಕಾಂಡ 7 : 76 (KNV)
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
ಅರಣ್ಯಕಾಂಡ 7 : 77 (KNV)
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು.
ಅರಣ್ಯಕಾಂಡ 7 : 78 (KNV)
ಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು.
ಅರಣ್ಯಕಾಂಡ 7 : 79 (KNV)
ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ಅರಣ್ಯಕಾಂಡ 7 : 80 (KNV)
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
ಅರಣ್ಯಕಾಂಡ 7 : 81 (KNV)
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅರಣ್ಯಕಾಂಡ 7 : 82 (KNV)
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
ಅರಣ್ಯಕಾಂಡ 7 : 83 (KNV)
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.
ಅರಣ್ಯಕಾಂಡ 7 : 84 (KNV)
ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.
ಅರಣ್ಯಕಾಂಡ 7 : 85 (KNV)
ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.
ಅರಣ್ಯಕಾಂಡ 7 : 86 (KNV)
ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್;
ಅರಣ್ಯಕಾಂಡ 7 : 87 (KNV)
ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,
ಅರಣ್ಯಕಾಂಡ 7 : 88 (KNV)
ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.
ಅರಣ್ಯಕಾಂಡ 7 : 89 (KNV)
ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
❮
❯