ಫಿಲಿಪ್ಪಿಯವರಿಗೆ 1 : 1 (KNV)
ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
ಫಿಲಿಪ್ಪಿಯವರಿಗೆ 1 : 2 (KNV)
ನಮ್ಮ ತಂದೆ ಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತ ನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ಫಿಲಿಪ್ಪಿಯವರಿಗೆ 1 : 3 (KNV)
ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ;
ಫಿಲಿಪ್ಪಿಯವರಿಗೆ 1 : 4 (KNV)
ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.
ಫಿಲಿಪ್ಪಿಯವರಿಗೆ 1 : 5 (KNV)
ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.
ಫಿಲಿಪ್ಪಿಯವರಿಗೆ 1 : 6 (KNV)
ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
ಫಿಲಿಪ್ಪಿಯವರಿಗೆ 1 : 7 (KNV)
ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
ಫಿಲಿಪ್ಪಿಯವರಿಗೆ 1 : 8 (KNV)
ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
ಫಿಲಿಪ್ಪಿಯವರಿಗೆ 1 : 9 (KNV)
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
ಫಿಲಿಪ್ಪಿಯವರಿಗೆ 1 : 10 (KNV)
ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
ಫಿಲಿಪ್ಪಿಯವರಿಗೆ 1 : 11 (KNV)
ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
ಫಿಲಿಪ್ಪಿಯವರಿಗೆ 1 : 12 (KNV)
ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ.
ಫಿಲಿಪ್ಪಿಯವರಿಗೆ 1 : 13 (KNV)
ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.
ಫಿಲಿಪ್ಪಿಯವರಿಗೆ 1 : 14 (KNV)
ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
ಫಿಲಿಪ್ಪಿಯವರಿಗೆ 1 : 15 (KNV)
ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
ಫಿಲಿಪ್ಪಿಯವರಿಗೆ 1 : 16 (KNV)
ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
ಫಿಲಿಪ್ಪಿಯವರಿಗೆ 1 : 17 (KNV)
ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.
ಫಿಲಿಪ್ಪಿಯವರಿಗೆ 1 : 18 (KNV)
ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
ಫಿಲಿಪ್ಪಿಯವರಿಗೆ 1 : 19 (KNV)
ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
ಫಿಲಿಪ್ಪಿಯವರಿಗೆ 1 : 20 (KNV)
ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
ಫಿಲಿಪ್ಪಿಯವರಿಗೆ 1 : 21 (KNV)
ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.
ಫಿಲಿಪ್ಪಿಯವರಿಗೆ 1 : 22 (KNV)
ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು;
ಫಿಲಿಪ್ಪಿಯವರಿಗೆ 1 : 23 (KNV)
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
ಫಿಲಿಪ್ಪಿಯವರಿಗೆ 1 : 24 (KNV)
ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು.
ಫಿಲಿಪ್ಪಿಯವರಿಗೆ 1 : 25 (KNV)
ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ.
ಫಿಲಿಪ್ಪಿಯವರಿಗೆ 1 : 26 (KNV)
ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು.
ಫಿಲಿಪ್ಪಿಯವರಿಗೆ 1 : 27 (KNV)
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
ಫಿಲಿಪ್ಪಿಯವರಿಗೆ 1 : 28 (KNV)
ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
ಫಿಲಿಪ್ಪಿಯವರಿಗೆ 1 : 29 (KNV)
ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.
ಫಿಲಿಪ್ಪಿಯವರಿಗೆ 1 : 30 (KNV)
ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
❮
❯