ಫಿಲಿಪ್ಪಿಯವರಿಗೆ 4 : 1 (KNV)
ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
ಫಿಲಿಪ್ಪಿಯವರಿಗೆ 4 : 2 (KNV)
ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
ಫಿಲಿಪ್ಪಿಯವರಿಗೆ 4 : 3 (KNV)
ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
ಫಿಲಿಪ್ಪಿಯವರಿಗೆ 4 : 4 (KNV)
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
ಫಿಲಿಪ್ಪಿಯವರಿಗೆ 4 : 5 (KNV)
ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
ಫಿಲಿಪ್ಪಿಯವರಿಗೆ 4 : 6 (KNV)
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
ಫಿಲಿಪ್ಪಿಯವರಿಗೆ 4 : 7 (KNV)
ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
ಫಿಲಿಪ್ಪಿಯವರಿಗೆ 4 : 8 (KNV)
ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
ಫಿಲಿಪ್ಪಿಯವರಿಗೆ 4 : 9 (KNV)
ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
ಫಿಲಿಪ್ಪಿಯವರಿಗೆ 4 : 10 (KNV)
ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.
ಫಿಲಿಪ್ಪಿಯವರಿಗೆ 4 : 11 (KNV)
ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
ಫಿಲಿಪ್ಪಿಯವರಿಗೆ 4 : 12 (KNV)
ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
ಫಿಲಿಪ್ಪಿಯವರಿಗೆ 4 : 13 (KNV)
ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
ಫಿಲಿಪ್ಪಿಯವರಿಗೆ 4 : 14 (KNV)
ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.
ಫಿಲಿಪ್ಪಿಯವರಿಗೆ 4 : 15 (KNV)
ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
ಫಿಲಿಪ್ಪಿಯವರಿಗೆ 4 : 16 (KNV)
ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.
ಫಿಲಿಪ್ಪಿಯವರಿಗೆ 4 : 17 (KNV)
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
ಫಿಲಿಪ್ಪಿಯವರಿಗೆ 4 : 18 (KNV)
ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
ಫಿಲಿಪ್ಪಿಯವರಿಗೆ 4 : 19 (KNV)
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
ಫಿಲಿಪ್ಪಿಯವರಿಗೆ 4 : 20 (KNV)
ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್.
ಫಿಲಿಪ್ಪಿಯವರಿಗೆ 4 : 21 (KNV)
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬ ಪರಿಶುದ್ಧನಿಗೆ ವಂದನೆ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
ಫಿಲಿಪ್ಪಿಯವರಿಗೆ 4 : 22 (KNV)
ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;
ಫಿಲಿಪ್ಪಿಯವರಿಗೆ 4 : 23 (KNV)
ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.

1 2 3 4 5 6 7 8 9 10 11 12 13 14 15 16 17 18 19 20 21 22 23