ಙ್ಞಾನೋಕ್ತಿಗಳು 10 : 1 (KNV)
ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
ಙ್ಞಾನೋಕ್ತಿಗಳು 10 : 2 (KNV)
ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.
ಙ್ಞಾನೋಕ್ತಿಗಳು 10 : 3 (KNV)
ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
ಙ್ಞಾನೋಕ್ತಿಗಳು 10 : 4 (KNV)
ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
ಙ್ಞಾನೋಕ್ತಿಗಳು 10 : 5 (KNV)
ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.
ಙ್ಞಾನೋಕ್ತಿಗಳು 10 : 6 (KNV)
ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
ಙ್ಞಾನೋಕ್ತಿಗಳು 10 : 7 (KNV)
ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
ಙ್ಞಾನೋಕ್ತಿಗಳು 10 : 8 (KNV)
ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.
ಙ್ಞಾನೋಕ್ತಿಗಳು 10 : 9 (KNV)
ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
ಙ್ಞಾನೋಕ್ತಿಗಳು 10 : 10 (KNV)
ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
ಙ್ಞಾನೋಕ್ತಿಗಳು 10 : 11 (KNV)
ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
ಙ್ಞಾನೋಕ್ತಿಗಳು 10 : 12 (KNV)
ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
ಙ್ಞಾನೋಕ್ತಿಗಳು 10 : 13 (KNV)
ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
ಙ್ಞಾನೋಕ್ತಿಗಳು 10 : 14 (KNV)
ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
ಙ್ಞಾನೋಕ್ತಿಗಳು 10 : 15 (KNV)
ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.
ಙ್ಞಾನೋಕ್ತಿಗಳು 10 : 16 (KNV)
ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.
ಙ್ಞಾನೋಕ್ತಿಗಳು 10 : 17 (KNV)
ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
ಙ್ಞಾನೋಕ್ತಿಗಳು 10 : 18 (KNV)
ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
ಙ್ಞಾನೋಕ್ತಿಗಳು 10 : 19 (KNV)
ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
ಙ್ಞಾನೋಕ್ತಿಗಳು 10 : 20 (KNV)
ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.
ಙ್ಞಾನೋಕ್ತಿಗಳು 10 : 21 (KNV)
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
ಙ್ಞಾನೋಕ್ತಿಗಳು 10 : 22 (KNV)
ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
ಙ್ಞಾನೋಕ್ತಿಗಳು 10 : 23 (KNV)
ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.
ಙ್ಞಾನೋಕ್ತಿಗಳು 10 : 24 (KNV)
ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.
ಙ್ಞಾನೋಕ್ತಿಗಳು 10 : 25 (KNV)
ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
ಙ್ಞಾನೋಕ್ತಿಗಳು 10 : 26 (KNV)
ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.
ಙ್ಞಾನೋಕ್ತಿಗಳು 10 : 27 (KNV)
ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
ಙ್ಞಾನೋಕ್ತಿಗಳು 10 : 28 (KNV)
ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
ಙ್ಞಾನೋಕ್ತಿಗಳು 10 : 29 (KNV)
ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು.
ಙ್ಞಾನೋಕ್ತಿಗಳು 10 : 30 (KNV)
ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
ಙ್ಞಾನೋಕ್ತಿಗಳು 10 : 31 (KNV)
ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
ಙ್ಞಾನೋಕ್ತಿಗಳು 10 : 32 (KNV)
ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32

BG:

Opacity:

Color:


Size:


Font: