ಙ್ಞಾನೋಕ್ತಿಗಳು 12 : 1 (KNV)
ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
ಙ್ಞಾನೋಕ್ತಿಗಳು 12 : 2 (KNV)
ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
ಙ್ಞಾನೋಕ್ತಿಗಳು 12 : 3 (KNV)
ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
ಙ್ಞಾನೋಕ್ತಿಗಳು 12 : 4 (KNV)
ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
ಙ್ಞಾನೋಕ್ತಿಗಳು 12 : 5 (KNV)
ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
ಙ್ಞಾನೋಕ್ತಿಗಳು 12 : 6 (KNV)
ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
ಙ್ಞಾನೋಕ್ತಿಗಳು 12 : 7 (KNV)
ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
ಙ್ಞಾನೋಕ್ತಿಗಳು 12 : 8 (KNV)
ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.
ಙ್ಞಾನೋಕ್ತಿಗಳು 12 : 9 (KNV)
ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು.
ಙ್ಞಾನೋಕ್ತಿಗಳು 12 : 10 (KNV)
ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
ಙ್ಞಾನೋಕ್ತಿಗಳು 12 : 11 (KNV)
ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
ಙ್ಞಾನೋಕ್ತಿಗಳು 12 : 12 (KNV)
ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.
ಙ್ಞಾನೋಕ್ತಿಗಳು 12 : 13 (KNV)
ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
ಙ್ಞಾನೋಕ್ತಿಗಳು 12 : 14 (KNV)
ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
ಙ್ಞಾನೋಕ್ತಿಗಳು 12 : 15 (KNV)
ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
ಙ್ಞಾನೋಕ್ತಿಗಳು 12 : 16 (KNV)
ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
ಙ್ಞಾನೋಕ್ತಿಗಳು 12 : 17 (KNV)
ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
ಙ್ಞಾನೋಕ್ತಿಗಳು 12 : 18 (KNV)
ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
ಙ್ಞಾನೋಕ್ತಿಗಳು 12 : 19 (KNV)
ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
ಙ್ಞಾನೋಕ್ತಿಗಳು 12 : 20 (KNV)
ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
ಙ್ಞಾನೋಕ್ತಿಗಳು 12 : 21 (KNV)
ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು.
ಙ್ಞಾನೋಕ್ತಿಗಳು 12 : 22 (KNV)
ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
ಙ್ಞಾನೋಕ್ತಿಗಳು 12 : 23 (KNV)
ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
ಙ್ಞಾನೋಕ್ತಿಗಳು 12 : 24 (KNV)
ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
ಙ್ಞಾನೋಕ್ತಿಗಳು 12 : 25 (KNV)
ಮನುಷ್ಯನ ಹೃದ ಯದಲ್ಲಿರುವ ಭಾರವು ಅದನ್ನು ಕುಗ್ಗಿಸುವದು; ಒಳ್ಳೆಯ ಮಾತು ಅದನ್ನು ಹಿಗ್ಗುವಂತೆ ಮಾಡುವದು.
ಙ್ಞಾನೋಕ್ತಿಗಳು 12 : 26 (KNV)
ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
ಙ್ಞಾನೋಕ್ತಿಗಳು 12 : 27 (KNV)
ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.
ಙ್ಞಾನೋಕ್ತಿಗಳು 12 : 28 (KNV)
ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
❮
❯