ಙ್ಞಾನೋಕ್ತಿಗಳು 23 : 1 (KNV)
ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು;
ಙ್ಞಾನೋಕ್ತಿಗಳು 23 : 2 (KNV)
ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.
ಙ್ಞಾನೋಕ್ತಿಗಳು 23 : 3 (KNV)
ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
ಙ್ಞಾನೋಕ್ತಿಗಳು 23 : 4 (KNV)
ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
ಙ್ಞಾನೋಕ್ತಿಗಳು 23 : 5 (KNV)
ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
ಙ್ಞಾನೋಕ್ತಿಗಳು 23 : 6 (KNV)
ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;
ಙ್ಞಾನೋಕ್ತಿಗಳು 23 : 7 (KNV)
ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
ಙ್ಞಾನೋಕ್ತಿಗಳು 23 : 8 (KNV)
ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ.
ಙ್ಞಾನೋಕ್ತಿಗಳು 23 : 9 (KNV)
ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.
ಙ್ಞಾನೋಕ್ತಿಗಳು 23 : 10 (KNV)
ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;
ಙ್ಞಾನೋಕ್ತಿಗಳು 23 : 11 (KNV)
ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.
ಙ್ಞಾನೋಕ್ತಿಗಳು 23 : 12 (KNV)
ಶಿಕ್ಷಣಕ್ಕೆ ನಿನ್ನ ಹೃದಯವನ್ನೂ ವಿವೇ ಕದ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.
ಙ್ಞಾನೋಕ್ತಿಗಳು 23 : 13 (KNV)
ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ.
ಙ್ಞಾನೋಕ್ತಿಗಳು 23 : 14 (KNV)
ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
ಙ್ಞಾನೋಕ್ತಿಗಳು 23 : 15 (KNV)
ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು.
ಙ್ಞಾನೋಕ್ತಿಗಳು 23 : 16 (KNV)
ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
ಙ್ಞಾನೋಕ್ತಿಗಳು 23 : 17 (KNV)
ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
ಙ್ಞಾನೋಕ್ತಿಗಳು 23 : 18 (KNV)
ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
ಙ್ಞಾನೋಕ್ತಿಗಳು 23 : 19 (KNV)
ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
ಙ್ಞಾನೋಕ್ತಿಗಳು 23 : 20 (KNV)
ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ.
ಙ್ಞಾನೋಕ್ತಿಗಳು 23 : 21 (KNV)
ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
ಙ್ಞಾನೋಕ್ತಿಗಳು 23 : 22 (KNV)
ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
ಙ್ಞಾನೋಕ್ತಿಗಳು 23 : 23 (KNV)
ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
ಙ್ಞಾನೋಕ್ತಿಗಳು 23 : 24 (KNV)
ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು.
ಙ್ಞಾನೋಕ್ತಿಗಳು 23 : 25 (KNV)
ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
ಙ್ಞಾನೋಕ್ತಿಗಳು 23 : 26 (KNV)
ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
ಙ್ಞಾನೋಕ್ತಿಗಳು 23 : 27 (KNV)
ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.
ಙ್ಞಾನೋಕ್ತಿಗಳು 23 : 28 (KNV)
ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ.
ಙ್ಞಾನೋಕ್ತಿಗಳು 23 : 29 (KNV)
ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
ಙ್ಞಾನೋಕ್ತಿಗಳು 23 : 30 (KNV)
ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
ಙ್ಞಾನೋಕ್ತಿಗಳು 23 : 31 (KNV)
ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
ಙ್ಞಾನೋಕ್ತಿಗಳು 23 : 32 (KNV)
ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ.
ಙ್ಞಾನೋಕ್ತಿಗಳು 23 : 33 (KNV)
ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
ಙ್ಞಾನೋಕ್ತಿಗಳು 23 : 34 (KNV)
ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.
ಙ್ಞಾನೋಕ್ತಿಗಳು 23 : 35 (KNV)
ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
❮
❯