ಙ್ಞಾನೋಕ್ತಿಗಳು 27 : 1 (KNV)
ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
ಙ್ಞಾನೋಕ್ತಿಗಳು 27 : 2 (KNV)
ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
ಙ್ಞಾನೋಕ್ತಿಗಳು 27 : 3 (KNV)
ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
ಙ್ಞಾನೋಕ್ತಿಗಳು 27 : 4 (KNV)
ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
ಙ್ಞಾನೋಕ್ತಿಗಳು 27 : 5 (KNV)
ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
ಙ್ಞಾನೋಕ್ತಿಗಳು 27 : 6 (KNV)
ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
ಙ್ಞಾನೋಕ್ತಿಗಳು 27 : 7 (KNV)
ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.
ಙ್ಞಾನೋಕ್ತಿಗಳು 27 : 8 (KNV)
ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.
ಙ್ಞಾನೋಕ್ತಿಗಳು 27 : 9 (KNV)
ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
ಙ್ಞಾನೋಕ್ತಿಗಳು 27 : 10 (KNV)
ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
ಙ್ಞಾನೋಕ್ತಿಗಳು 27 : 11 (KNV)
ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.
ಙ್ಞಾನೋಕ್ತಿಗಳು 27 : 12 (KNV)
ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
ಙ್ಞಾನೋಕ್ತಿಗಳು 27 : 13 (KNV)
ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
ಙ್ಞಾನೋಕ್ತಿಗಳು 27 : 14 (KNV)
ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
ಙ್ಞಾನೋಕ್ತಿಗಳು 27 : 15 (KNV)
ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ.
ಙ್ಞಾನೋಕ್ತಿಗಳು 27 : 16 (KNV)
ಅವಳನ್ನು ಅಡಗಿಸು ವವನು ಗಾಳಿಯನ್ನೂ ತನ್ನನ್ನು ರಟ್ಟುಮಾಡುವ ಅವನ ಬಲಗೈಯ ತೈಲವನ್ನೂ ಅಡಗಿಸುತ್ತಾನೆ.
ಙ್ಞಾನೋಕ್ತಿಗಳು 27 : 17 (KNV)
ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
ಙ್ಞಾನೋಕ್ತಿಗಳು 27 : 18 (KNV)
ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
ಙ್ಞಾನೋಕ್ತಿಗಳು 27 : 19 (KNV)
ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಹೃದಯವು ಮಾಡುತ್ತದೆ.
ಙ್ಞಾನೋಕ್ತಿಗಳು 27 : 20 (KNV)
ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ.
ಙ್ಞಾನೋಕ್ತಿಗಳು 27 : 21 (KNV)
ಬೆಳ್ಳಿ ಬಂಗಾರ ಗಳ ಪುಟಕ್ಕೆ ಕುಲುಮೆ ಹೇಗೆಯೋ ಹಾಗೆಯೇ ತನ್ನ ಹೊಗಳಿಕೆಗೆ ಮನುಷ್ಯನಿದ್ದಾನೆ.
ಙ್ಞಾನೋಕ್ತಿಗಳು 27 : 22 (KNV)
ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
ಙ್ಞಾನೋಕ್ತಿಗಳು 27 : 23 (KNV)
ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
ಙ್ಞಾನೋಕ್ತಿಗಳು 27 : 24 (KNV)
ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
ಙ್ಞಾನೋಕ್ತಿಗಳು 27 : 25 (KNV)
ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ.
ಙ್ಞಾನೋಕ್ತಿಗಳು 27 : 26 (KNV)
ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
ಙ್ಞಾನೋಕ್ತಿಗಳು 27 : 27 (KNV)
ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27

BG:

Opacity:

Color:


Size:


Font: