ಙ್ಞಾನೋಕ್ತಿಗಳು 29 : 1 (KNV)
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ಙ್ಞಾನೋಕ್ತಿಗಳು 29 : 2 (KNV)
ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
ಙ್ಞಾನೋಕ್ತಿಗಳು 29 : 3 (KNV)
ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
ಙ್ಞಾನೋಕ್ತಿಗಳು 29 : 4 (KNV)
ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
ಙ್ಞಾನೋಕ್ತಿಗಳು 29 : 5 (KNV)
ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
ಙ್ಞಾನೋಕ್ತಿಗಳು 29 : 6 (KNV)
ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
ಙ್ಞಾನೋಕ್ತಿಗಳು 29 : 7 (KNV)
ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
ಙ್ಞಾನೋಕ್ತಿಗಳು 29 : 8 (KNV)
ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
ಙ್ಞಾನೋಕ್ತಿಗಳು 29 : 9 (KNV)
ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
ಙ್ಞಾನೋಕ್ತಿಗಳು 29 : 10 (KNV)
ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
ಙ್ಞಾನೋಕ್ತಿಗಳು 29 : 11 (KNV)
ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
ಙ್ಞಾನೋಕ್ತಿಗಳು 29 : 12 (KNV)
ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
ಙ್ಞಾನೋಕ್ತಿಗಳು 29 : 13 (KNV)
ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.
ಙ್ಞಾನೋಕ್ತಿಗಳು 29 : 14 (KNV)
ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
ಙ್ಞಾನೋಕ್ತಿಗಳು 29 : 15 (KNV)
ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
ಙ್ಞಾನೋಕ್ತಿಗಳು 29 : 16 (KNV)
ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
ಙ್ಞಾನೋಕ್ತಿಗಳು 29 : 17 (KNV)
ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.
ಙ್ಞಾನೋಕ್ತಿಗಳು 29 : 18 (KNV)
ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
ಙ್ಞಾನೋಕ್ತಿಗಳು 29 : 19 (KNV)
ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.
ಙ್ಞಾನೋಕ್ತಿಗಳು 29 : 20 (KNV)
ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
ಙ್ಞಾನೋಕ್ತಿಗಳು 29 : 21 (KNV)
ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.
ಙ್ಞಾನೋಕ್ತಿಗಳು 29 : 22 (KNV)
ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
ಙ್ಞಾನೋಕ್ತಿಗಳು 29 : 23 (KNV)
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
ಙ್ಞಾನೋಕ್ತಿಗಳು 29 : 24 (KNV)
ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.
ಙ್ಞಾನೋಕ್ತಿಗಳು 29 : 25 (KNV)
ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
ಙ್ಞಾನೋಕ್ತಿಗಳು 29 : 26 (KNV)
ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.
ಙ್ಞಾನೋಕ್ತಿಗಳು 29 : 27 (KNV)
ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
❮
❯