ಙ್ಞಾನೋಕ್ತಿಗಳು 30 : 1 (KNV)
ಯಾಕೆ ಎಂಬವನ ಮಗನಾದ ಆಗೂರನ ಪ್ರವಾದನೆಯ ಮಾತುಗಳು; ಇವನು ಇಥಿಯೇಲನಿಗೆ ಹೌದು, ಇಥಿಯೇಲನಿಗೂ ಉಕ್ಕಾಲ ನಿಗೂ ಹೀಗೆ ಹೇಳಿದನು.
ಙ್ಞಾನೋಕ್ತಿಗಳು 30 : 2 (KNV)
ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.
ಙ್ಞಾನೋಕ್ತಿಗಳು 30 : 3 (KNV)
ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ.
ಙ್ಞಾನೋಕ್ತಿಗಳು 30 : 4 (KNV)
ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
ಙ್ಞಾನೋಕ್ತಿಗಳು 30 : 5 (KNV)
ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
ಙ್ಞಾನೋಕ್ತಿಗಳು 30 : 6 (KNV)
ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
ಙ್ಞಾನೋಕ್ತಿಗಳು 30 : 7 (KNV)
ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;
ಙ್ಞಾನೋಕ್ತಿಗಳು 30 : 8 (KNV)
ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
ಙ್ಞಾನೋಕ್ತಿಗಳು 30 : 9 (KNV)
ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
ಙ್ಞಾನೋಕ್ತಿಗಳು 30 : 10 (KNV)
ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
ಙ್ಞಾನೋಕ್ತಿಗಳು 30 : 11 (KNV)
ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
ಙ್ಞಾನೋಕ್ತಿಗಳು 30 : 12 (KNV)
ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
ಙ್ಞಾನೋಕ್ತಿಗಳು 30 : 13 (KNV)
ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
ಙ್ಞಾನೋಕ್ತಿಗಳು 30 : 14 (KNV)
ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
ಙ್ಞಾನೋಕ್ತಿಗಳು 30 : 15 (KNV)
ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
ಙ್ಞಾನೋಕ್ತಿಗಳು 30 : 16 (KNV)
ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ.
ಙ್ಞಾನೋಕ್ತಿಗಳು 30 : 17 (KNV)
ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
ಙ್ಞಾನೋಕ್ತಿಗಳು 30 : 18 (KNV)
ನನಗೆ ಆಶ್ಚರ್ಯವಾದ ಮೂರು ಸಂಗತಿಗ ಳಿವೆ. ಹೌದು, ನಾನು ಅರಿಯದಿರುವ ನಾಲ್ಕು ಸಂಗ ತಿಗಳಿವೆ--
ಙ್ಞಾನೋಕ್ತಿಗಳು 30 : 19 (KNV)
ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.
ಙ್ಞಾನೋಕ್ತಿಗಳು 30 : 20 (KNV)
ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
ಙ್ಞಾನೋಕ್ತಿಗಳು 30 : 21 (KNV)
ಭೂಮಿಯು ಮೂರರಿಂದ ಕಳವಳಗೊಳ್ಳುತ್ತದೆ; ನಾಲ್ವರನ್ನು ಅದು ತಾಳಲಾರದು
ಙ್ಞಾನೋಕ್ತಿಗಳು 30 : 22 (KNV)
ಆಳುವ ದಾಸನು, ಹೊಟ್ಟೆತುಂಬಿದ ನೀಚನು,
ಙ್ಞಾನೋಕ್ತಿಗಳು 30 : 23 (KNV)
ಮದುವೆಯಾದ ಚಂಡಿಯು, ತನ್ನ ಯಜಮಾನಳಿಗೆ ಬಾಧ್ಯಸ್ಥಳಾದ ದಾಸಿಯು.
ಙ್ಞಾನೋಕ್ತಿಗಳು 30 : 24 (KNV)
ಭೂಮಿಯ ಮೇಲೆ ಅಧಿಕ ಜ್ಞಾನವು ಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ.
ಙ್ಞಾನೋಕ್ತಿಗಳು 30 : 25 (KNV)
ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.
ಙ್ಞಾನೋಕ್ತಿಗಳು 30 : 26 (KNV)
ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.
ಙ್ಞಾನೋಕ್ತಿಗಳು 30 : 27 (KNV)
ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.
ಙ್ಞಾನೋಕ್ತಿಗಳು 30 : 28 (KNV)
ಜೇಡರ ಹುಳು ತನ್ನ ಕೈಗಳಿಂದ ಹಿಡಿದುಕೊಳ್ಳುತ್ತದೆ; ಅದು ಅರಮನೆ ಗಳಲ್ಲಿ ಇರುತ್ತದೆ.
ಙ್ಞಾನೋಕ್ತಿಗಳು 30 : 29 (KNV)
ಗಂಭೀರ ಗಮನದ ಮೂರು ಪ್ರಾಣಿಗಳಿವೆ; ಹೌದು, ನಡತೆಯಲ್ಲಿ ಅಂದವಾಗಿರುವ ನಾಲ್ಕು ಪ್ರಾಣಿಗಳಿವೆ.
ಙ್ಞಾನೋಕ್ತಿಗಳು 30 : 30 (KNV)
ಮೃಗಗಳಲ್ಲಿ ಬಲಿಷ್ಠವಾಗಿ ರುವ ಸಿಂಹವು ಯಾವದಕ್ಕೂ ಹೆದರುವುದಿಲ್ಲ.
ಙ್ಞಾನೋಕ್ತಿಗಳು 30 : 31 (KNV)
ಬೇಟೆಯ ನಾಯಿ; ಹೋತವು ಸಹ; ಸೈನ್ಯಸಮೇತ ನಾದ ಅರಸನು.
ಙ್ಞಾನೋಕ್ತಿಗಳು 30 : 32 (KNV)
ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.
ಙ್ಞಾನೋಕ್ತಿಗಳು 30 : 33 (KNV)
ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: