ಕೀರ್ತನೆಗಳು 107 : 1 (KNV)
ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
ಕೀರ್ತನೆಗಳು 107 : 2 (KNV)
ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
ಕೀರ್ತನೆಗಳು 107 : 3 (KNV)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ.
ಕೀರ್ತನೆಗಳು 107 : 4 (KNV)
ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
ಕೀರ್ತನೆಗಳು 107 : 5 (KNV)
ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು.
ಕೀರ್ತನೆಗಳು 107 : 6 (KNV)
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
ಕೀರ್ತನೆಗಳು 107 : 7 (KNV)
ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
ಕೀರ್ತನೆಗಳು 107 : 8 (KNV)
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
ಕೀರ್ತನೆಗಳು 107 : 9 (KNV)
ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
ಕೀರ್ತನೆಗಳು 107 : 10 (KNV)
ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
ಕೀರ್ತನೆಗಳು 107 : 11 (KNV)
ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ
ಕೀರ್ತನೆಗಳು 107 : 12 (KNV)
ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು.
ಕೀರ್ತನೆಗಳು 107 : 13 (KNV)
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
ಕೀರ್ತನೆಗಳು 107 : 14 (KNV)
ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
ಕೀರ್ತನೆಗಳು 107 : 15 (KNV)
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
ಕೀರ್ತನೆಗಳು 107 : 16 (KNV)
ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.
ಕೀರ್ತನೆಗಳು 107 : 17 (KNV)
ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ.
ಕೀರ್ತನೆಗಳು 107 : 18 (KNV)
ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
ಕೀರ್ತನೆಗಳು 107 : 19 (KNV)
ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
ಕೀರ್ತನೆಗಳು 107 : 20 (KNV)
ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
ಕೀರ್ತನೆಗಳು 107 : 21 (KNV)
ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
ಕೀರ್ತನೆಗಳು 107 : 22 (KNV)
ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
ಕೀರ್ತನೆಗಳು 107 : 23 (KNV)
ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು
ಕೀರ್ತನೆಗಳು 107 : 24 (KNV)
ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
ಕೀರ್ತನೆಗಳು 107 : 25 (KNV)
ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
ಕೀರ್ತನೆಗಳು 107 : 26 (KNV)
ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.
ಕೀರ್ತನೆಗಳು 107 : 27 (KNV)
ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
ಕೀರ್ತನೆಗಳು 107 : 28 (KNV)
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
ಕೀರ್ತನೆಗಳು 107 : 29 (KNV)
ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
ಕೀರ್ತನೆಗಳು 107 : 30 (KNV)
ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
ಕೀರ್ತನೆಗಳು 107 : 31 (KNV)
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ.
ಕೀರ್ತನೆಗಳು 107 : 32 (KNV)
ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ.
ಕೀರ್ತನೆಗಳು 107 : 33 (KNV)
ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ
ಕೀರ್ತನೆಗಳು 107 : 34 (KNV)
ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
ಕೀರ್ತನೆಗಳು 107 : 35 (KNV)
ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
ಕೀರ್ತನೆಗಳು 107 : 36 (KNV)
ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ,
ಕೀರ್ತನೆಗಳು 107 : 37 (KNV)
ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.
ಕೀರ್ತನೆಗಳು 107 : 38 (KNV)
ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
ಕೀರ್ತನೆಗಳು 107 : 39 (KNV)
ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ.
ಕೀರ್ತನೆಗಳು 107 : 40 (KNV)
ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
ಕೀರ್ತನೆಗಳು 107 : 41 (KNV)
ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
ಕೀರ್ತನೆಗಳು 107 : 42 (KNV)
ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.
ಕೀರ್ತನೆಗಳು 107 : 43 (KNV)
ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
❮
❯