ಕೀರ್ತನೆಗಳು 109 : 1 (KNV)
ನನ್ನ ಸ್ತೋತ್ರದ ದೇವರೇ, ಮೌನವಾಗಿರಬೇಡ.
ಕೀರ್ತನೆಗಳು 109 : 2 (KNV)
ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
ಕೀರ್ತನೆಗಳು 109 : 3 (KNV)
ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
ಕೀರ್ತನೆಗಳು 109 : 4 (KNV)
ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
ಕೀರ್ತನೆಗಳು 109 : 5 (KNV)
ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
ಕೀರ್ತನೆಗಳು 109 : 6 (KNV)
ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
ಕೀರ್ತನೆಗಳು 109 : 7 (KNV)
ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
ಕೀರ್ತನೆಗಳು 109 : 8 (KNV)
ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
ಕೀರ್ತನೆಗಳು 109 : 9 (KNV)
ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.
ಕೀರ್ತನೆಗಳು 109 : 10 (KNV)
ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
ಕೀರ್ತನೆಗಳು 109 : 11 (KNV)
ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ.
ಕೀರ್ತನೆಗಳು 109 : 12 (KNV)
ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ.
ಕೀರ್ತನೆಗಳು 109 : 13 (KNV)
ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
ಕೀರ್ತನೆಗಳು 109 : 14 (KNV)
ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
ಕೀರ್ತನೆಗಳು 109 : 15 (KNV)
ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
ಕೀರ್ತನೆಗಳು 109 : 16 (KNV)
ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.
ಕೀರ್ತನೆಗಳು 109 : 17 (KNV)
ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
ಕೀರ್ತನೆಗಳು 109 : 18 (KNV)
ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.
ಕೀರ್ತನೆಗಳು 109 : 19 (KNV)
ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
ಕೀರ್ತನೆಗಳು 109 : 20 (KNV)
ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.
ಕೀರ್ತನೆಗಳು 109 : 21 (KNV)
ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು.
ಕೀರ್ತನೆಗಳು 109 : 22 (KNV)
ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
ಕೀರ್ತನೆಗಳು 109 : 23 (KNV)
ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;
ಕೀರ್ತನೆಗಳು 109 : 24 (KNV)
ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
ಕೀರ್ತನೆಗಳು 109 : 25 (KNV)
ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
ಕೀರ್ತನೆಗಳು 109 : 26 (KNV)
ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು.
ಕೀರ್ತನೆಗಳು 109 : 27 (KNV)
ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ.
ಕೀರ್ತನೆಗಳು 109 : 28 (KNV)
ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
ಕೀರ್ತನೆಗಳು 109 : 29 (KNV)
ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
ಕೀರ್ತನೆಗಳು 109 : 30 (KNV)
ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು.
ಕೀರ್ತನೆಗಳು 109 : 31 (KNV)
ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31