ಕೀರ್ತನೆಗಳು 113 : 1 (KNV)
ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ;
ಕೀರ್ತನೆಗಳು 113 : 2 (KNV)
ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ.
ಕೀರ್ತನೆಗಳು 113 : 3 (KNV)
ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.
ಕೀರ್ತನೆಗಳು 113 : 4 (KNV)
ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ.
ಕೀರ್ತನೆಗಳು 113 : 5 (KNV)
ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.
ಕೀರ್ತನೆಗಳು 113 : 6 (KNV)
ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.
ಕೀರ್ತನೆಗಳು 113 : 7 (KNV)
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ಕೀರ್ತನೆಗಳು 113 : 8 (KNV)
ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.
ಕೀರ್ತನೆಗಳು 113 : 9 (KNV)
ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.

1 2 3 4 5 6 7 8 9

BG:

Opacity:

Color:


Size:


Font: