ಕೀರ್ತನೆಗಳು 115 : 1 (KNV)
ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.
ಕೀರ್ತನೆಗಳು 115 : 2 (KNV)
ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?
ಕೀರ್ತನೆಗಳು 115 : 3 (KNV)
ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
ಕೀರ್ತನೆಗಳು 115 : 4 (KNV)
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಕೀರ್ತನೆಗಳು 115 : 5 (KNV)
ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ.
ಕೀರ್ತನೆಗಳು 115 : 6 (KNV)
ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ.
ಕೀರ್ತನೆಗಳು 115 : 7 (KNV)
ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,
ಕೀರ್ತನೆಗಳು 115 : 8 (KNV)
ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
ಕೀರ್ತನೆಗಳು 115 : 9 (KNV)
ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.
ಕೀರ್ತನೆಗಳು 115 : 10 (KNV)
ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ.
ಕೀರ್ತನೆಗಳು 115 : 11 (KNV)
ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.
ಕೀರ್ತನೆಗಳು 115 : 12 (KNV)
ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು.
ಕೀರ್ತನೆಗಳು 115 : 13 (KNV)
ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.
ಕೀರ್ತನೆಗಳು 115 : 14 (KNV)
ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.
ಕೀರ್ತನೆಗಳು 115 : 15 (KNV)
ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
ಕೀರ್ತನೆಗಳು 115 : 16 (KNV)
ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
ಕೀರ್ತನೆಗಳು 115 : 17 (KNV)
ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.
ಕೀರ್ತನೆಗಳು 115 : 18 (KNV)
ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.

1 2 3 4 5 6 7 8 9 10 11 12 13 14 15 16 17 18